ಬೆಂಗಳೂರು ಗ್ರಾಮಾಂತರ

ಇಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

Published On :

ಕ.ಪ. ವಾರ್ತೆ ರಾಮನಗರ ಮಾ 14
ರಾಮನಗರ: ತಾಲೂಕಿನ ಬಿಡದಿ ಬಳಿಯ ಕೋತಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್‌ನ ಜಾಗ ವಶಪಡಿಸಿಕೊಳ್ಳಲು ಮುಂದಾಗಿರುವ ಅರಣ್ಯ ಇಲಾಖೆ ಕ್ರಮ ವಿರೋಧಿಸಿ  ಕಸ್ತೂರಿ ಕರ್ನಾಟಕ ಜನಪರ ವೇದಿಕೆಯು ಮಾ.15ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಳಗ್ಗೆ 10ಕ್ಕೆ ಕೋತಿ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ರಾಮನಗರದ ಅರಣ್ಯ ಇಲಾಖೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಟ್ರಸ್ಟ್ ವತಿಯಿಂದ ದೇಗುಲ ಪಕ್ಕ ಛತ್ರ ನಿರ್ಮಿಸಿ ನಿತ್ಯ ಅನ್ನದಾಸೋಹ ಮಾಡಲಾಗುತ್ತಿದೆ. ಬಡ ಕುಟುಂಬದವರ ಮದುವೆ ಸಮಾರಂಭಗಳಿಗೆ ಕಡಿಮೆ ದರದಲ್ಲಿ ಛತ್ರ ನೀಡಲಾಗುತ್ತಿದೆ. ಇದೆಲ್ಲ ಗೊತ್ತಿದ್ದರೂ ಅರಣ್ಯ ಇಲಾಖೆ ಛತ್ರ ನೆಲಸಮಕ್ಕೆ ಮುಂದಾಗಿದೆ ಎಂದು ವೇದಿಕೆ ಅಧ್ಯಕ್ಷ ರಮೇಶಗೌಡ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.