ಜನತೆಗೆ ಅಗತ್ಯ ಮೂಲ ಸೌಕರ್ಯ ದೊರಕಿಸಿಕೊಡಿ
ಕ.ಪ. ವಾರ್ತೆ ನೆಲಮಂಗಲ ಮಾ 14
ಪಟ್ಟಣದ ಜನತೆಗೆ ಅಗತ್ಯ ಮೂಲಭೂತ ಸೌಕರ್ಯ ದೊರಕಿಸಿಕೊಡುವಲ್ಲಿ ಹೆಚ್ಚಿನ ಶ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಹೇಳಿದರು.
ಅವರು ಗುರುವಾರ ಪಟ್ಟಣದ ಹಾಲಿಡೇ ಪಾಮ್ಸ್ ಸಭಾಂಗಣದಲ್ಲಿ ಪುರಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್ ಪಕ್ಷದಿಂದ ಆಯ್ಕೆಗೊಂಡ 16 ಜನ ನೂತನ ಸದಸ್ಯರುಗಳಿಗೆ ಅಭಿನಂದಿಸಿ ಮಾತನಾಡುತ್ತಾ ಕಳೆದ 27 ವರ್ಷಗಳಿಂದ ಜನತಾ ದಳವು ಪಟ್ಟಣದಲ್ಲಿ ಸಂಪೂರ್ಣ ಬಹುಮತದಲ್ಲಿ ಅಧಿಕಾರ ಗದ್ದುಗೆ ಪಡೆದಿರಲಿಲ್ಲ. ಈ ಬಾರಿ ಪಟ್ಟಣದ ಜನತೆ ಜೆ.ಡಿ.ಎಸ್ ಪಕ್ಷದ ಮೇಲೆ ಒಲವು ತೋರಿ 16 ಜನ ಸದಸ್ಯರನ್ನು ಆಯ್ಕೆಗೊಳಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಚೈತನ್ಯ ನೀಡಿದ್ದಾರೆ.
ನೂತನವಾಗಿ ಆಯ್ಕೆಗೊಂಡಿದ್ದ ಪುರಸಭಾ ಸದಸ್ಯರುಗಳಿಗೆ ಜೆ.ಡಿ.ಎಸ್ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಮುಖಂಡರಾದ ಗಂಗಣ್ಣ, ಬಿ.ಎಂ.ಎಲ್.ಕಾಂತರಾಜು, ತಿಮ್ಮ ರಾಜು, ಗೋವೇನಹಳ್ಳಿ ಶಿವಣ್ಣ, ಲಕ್ಷ್ಮೀನಾರಾಯಣ್, ಶಿವಕುಮಾರ್ ಸೇರಿದಂತೆ ನೂತನವಾಗಿ ಆಯ್ಕೆಯಾಗಿದ್ದ ಸದಸ್ಯರುಗಳು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

