ಬೆಂಗಳೂರು ಗ್ರಾಮಾಂತರ

ಪಾರಂಪರಿಕ ವೈದ್ಯ ಪದ್ಧತಿ ಅನನ್ಯ

Published On :

ಕ.ಪ್ರ. ವಾರ್ತೆ, ದೊಡ್ಡಬಳ್ಳಾಪುರ,ಮಾ.17
 ಭಾರತೀಯ ಪಾರಂಪರಿಕ ವೈದ್ಯ ಪದ್ಧತಿ ಇತ್ತೀಚಿನ ದಿನಗಳಲ್ಲಿ ಮತ್ತೆ ಜನಮುಖಿಯಾಗಿದ್ದು ಅನೇಕ ರೋಗಗಳಿಗೆ ಜನ ಆಯುರ್ವೇದದ ಮೂಲಕ ಪರಿಹಾರ ಕಂಡುಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.
ಆಧುನಿಕ ವೈದ್ಯ ಪದ್ಧತಿ ಎಷ್ಟೇ ಬೆಳೆದರೂ ಆಯುರ್ವೇದ ತನ್ನದೇ ಆದ ಮಹತ್ವವನ್ನು ಇಂದಿಗೂ ಉಳಿಸಿಕೊಂಡಿದೆ ಎಂದು ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಹೇಳಿದರು.
ಇಲ್ಲಿನ ಡಿಕ್ರಾಸ್ ರಸ್ತೆಯಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂಗ್ಲಿಷ್ ಔಷಧಗಳ ಭರಾಟೆಯಲ್ಲಿ ಆಯುರ್ವೇದ ನೇಪತ್ಯಕ್ಕೆ ಸರಿಯುತ್ತಿದೆ ಎಂಬ ವಾದವನ್ನು ಒಪ್ಪಲಾಗದು. ಪ್ರತಿಯೊಂದು ವೈದ್ಯ ಪದ್ಧತಿಗೂ ತನ್ನದೇ ಆದ ಅನನ್ಯತೆ ಇರುತ್ತದೆ. ಅಡ್ಡಪರಿಣಾಮಗಳಿಲ್ಲದ ವೈದ್ಯ ಪದ್ಧತಿ ಜನರಿಗೆ ಬಹುಬೇಗ ಇಷ್ಟವಾಗುತ್ತದೆ. ಸಂಜೀವಿನಿಯಾಗಿ ಕೆಲಸ ಮಾಡಬಲ್ಲ ಚಿಕಿತ್ಸೆಗೆ ಜನ ಮಹತ್ವ ನೀಡುತ್ತಾರೆ. ಸರ್ಕಾರ ಕೂಡ ಪಾರಂಪರಿಕ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆಗಳನ್ನು ನಿರ್ಮಿಸಿದೆ. ಆಯುರ್ವೇದ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಬೇಕಿದೆ ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್.ಹನುಮಂತೇಗೌಡ ಅಧ್ಯಕ್ಷತೆ ವಹಿಸಿದ್ದರು. ರೇಷ್ಮೆ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಎನ್.ಅರವಿಂದ್, ಜಿ.ಪಂ ಮಾಜಿ ಅಧ್ಯಕ್ಷೆ ಭಾಗ್ಯಮ್ಮ, ತಾ.ಪಂ ಅಧ್ಯಕ್ಷ ನಾಗರಾಜು, ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಜಗದೀಶರೆಡ್ಡಿ, ನಗರಸಭೆ ಸದಸ್ಯ ಪ್ರಕಾಶ್ ಹಾಜರಿದ್ದರು.
ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಕಚೇರಿ ಮತ್ತು ಕೇಂದ್ರ ಸರ್ಕಾರದ ವಿಶೇಷ ಯೋಜನೆಯಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.