ಇಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಕಂಪ್ಯೂಟಿಂಗ್ ಟೆಕ್ನಾಲಜಿ ಅಂಡ್ ಟ್ರೆಂಡ್ಸ್ ಕುರಿತ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾ.20ರ ಬುಧವಾರ ಮತ್ತು 21ರ ಗುರುವಾರ ನಡೆಯಲಿದೆ. ಬುಧವಾರ ಬೆಳಗ್ಗೆ 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಐಐಎಸ್ಸಿಯ ಹಿರಿಯ ವಿಜ್ಞಾನಿ ಡಾ.ವಿ.ಸುಶೀಲಾದೇವಿ, ಆರ್ಎಸ್ಎನ್ಐಟಿಯ ಡಾ.ಜಿ.ಟಿ.ರಘು, ಡಾ.ಎಂ.ವಿ.ಸುಬ್ರಹ್ಮಣಿ, ಎಸಿಎಸ್ಸಿಇಯ ಡಾ.ಕೆ.ಸೀತಾರಾಂ, ಎಸ್ಜೆಬಿಐಟಿಯ ಡಾ.ಎಚ್.ಎಸ್.ಮೋಹನ್ ಭಾಗವಹಿಸಲಿದ್ದಾರೆ. ಎಸ್ಡಿಯುಇಟಿ ಅಧ್ಯಕ್ಷ ಆರ್.ಎಲ್.ಜಾಲಪ್ಪ, ಕಾರ್ಯದರ್ಶಿ ಜಿ.ಎಚ್.ನಾಗರಾಜ ಅಧ್ಯಕ್ಷತೆ ವಹಿಸುವರು. ಗುರುವಾರ ಸಂಜೆ 3 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಎಂಎಸ್ಆರ್ಐಟಿಯ ಡಾ.ಜಿ.ಎಂ.ಲಿಂಗರಾಜು, ಡಾ.ಎಚ್.ಎಸ್.ರಮೇಶ್ಬಾಬು, ಡಾ.ಕೆ.ಸೀತಾರಾಂ ಭಾಗವಹಿಸುವರು.
ಜೆಡಿಎಸ್ಗೆ ಮಂಜು ರಾಜಿನಾಮೆ
ದೊಡ್ಡಬಳ್ಳಾಪುರ: ಇಲ್ಲಿನ ಜೆಡಿಎಸ್ ಯುವಮುಖಂಡ ಕೆ.ಮಂಜುನಾಥ್(ಜನಪರ ಮಂಜು) ಪಕ್ಷದ ತಾಲೂಕು ಘಟಕದ ಪ್ರಚಾರ ಸಮಿತಿ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದ್ದರಿಂದ ಕಳೆದ 5 ವರ್ಷಗಳಲ್ಲಿ ಪಕ್ಷದ ಬೆಳವಣಿಗೆಗೆ ತೋರಿದ ನಿಷ್ಠೆಗೆ ತಕ್ಕ ಗೌರವ ಸಿಗದೇ ಹೋದ್ದರಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿರುವ ಮಂಜುನಾಥ್, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಪಕ್ಷದಲ್ಲಿ ಬೆಲೆ ಸಿಗುತ್ತಿಲ್ಲ. ಹೀಗಾಗಿ ರಾಜಿನಾಮೆಯನ್ನು ತಾಲೂಕು ಅಧ್ಯಕ್ಷ ಆರ್. ಗೋವಿಂದರಾಜು ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಇಂದು ಕಾರ್ಯಾಗಾರ
ನೆಲಮಂಗಲ ಮಾ.19 ಪಟ್ಟಣದ ಗೌರ್ನ್ಮೆಂಟ್ ಜೂನಿಯರ್ ಕಾಲೇಜಿನ ಬಿ.ಆರ್.ಸಿ.ಸಭಾಂಗಣದಲ್ಲಿ ಬುಧವಾರದಂದು ಮಧ್ಯಾಹ್ನ 2-00 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತ ಆಶ್ರಯದಲ್ಲಿ ಪ್ರಸವ ಪೂರ್ವ ಬ್ರೂಣಲಿಂಗ ಪತ್ತೆ ಮಾಡುವ ತಂತ್ರ ನಿಷೇಧ ಕಾಯಿದೆ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರವನ್ನು ಶಾಸಕ ಎಂ.ವಿ.ನಾಗರಾಜು ಉದ್ಘಾಟಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಕಾನೂನು ಸೇವಾ ಸಮಿತಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಅಧ್ಯಕ್ಷ ದಿನೇಶ್ ಹೆಗಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚನ್ನಮಲ್ಲಯ್ಯ, ಉಪ ಪೊಲೀಸ್ ಅಧೀಕ್ಷಕ ಮಲ್ಲೇಶ್, ವಕೀಲರ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ, ಮಂಜುನಾಥ್, ಸಹಾಯಕ ಸರ್ಕಾರಿ ಅಭಿಯೋಜಕರು ಭಾಗ್ಯಲಕ್ಷ್ಮಿ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ನಳಿನ.ಸಿ.ಕಾಗಿನೆಲಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್ ಆಗಮಿಸಲಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ನರಸಿಂಹಯ್ಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

