ಪೋಷಕರು ಸರ್ಕಾರಿ ಶಾಲೆ ಕೀಳರಿಮೆ ತೊರೆಯಲಿ: ಎ.ಜನಾರ್ದನ ರೆಡ್ಡಿ
ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಿಗೆ ಇರುವ ಕೀಳರಿಮೆ ಹೋಗಲಾಡಿಸಿ ಶಾಲೆಯ ವಾತಾವರಣವನ್ನು ಖಾಸಗಿ ಶಾಲೆಗಳಂತೆ ಮಾರ್ಪಡಿಸಲು ಟೌನ್ ಸರ್ಕಾರಿ ಶಾಲೆಯ ಮಕ್ಕಳಿಗೆ 400 ಸಮವಸ್ತ್ರ ಉಚಿತವಾಗಿ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶಿರಡಿ ಸಾಯಿಬಾಬಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ.ಜನಾರ್ದನ ರೆಡ್ಡಿ ಭರವಸೆ ನೀಡಿದ್ದಾರೆ ಸೂಲಿಬೆಲೆ ಟೌನ್ ರ್ಕಾರಿ ಶಾಲೆ ಆವರಣದಲ್ಲಿ ಸೋಮವಾರ ನಡೆದ ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಖಾಸಗಿ ಶಾಲೆಗಳಿಗಿಂತ ಕನ್ನಡ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಶೈಕ್ಷಣಿಕವಾಗಿ ಹೆಚ್ಚು ಪ್ರಗತಿ ಸಾಧಿಸಿದ್ದಾರೆ.
ಹೆಚ್ಚಿನ ಶೈಕ್ಷಣಿಕ ಅರ್ಹತೆಯಿರುವ ಶಿಕ್ಷಕರನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಮನೋಭಾವ ಪೋಷಕರು ಬೆಳೆಸಿಕೊಳ್ಳಬೇಕು.ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಮುಖ್ಯ ಶಿಕ್ಷಕಿ ಓಂಕಾರಮ್ಮ ಮಾತನಾಡಿ, ಗುರಿಯನ್ನು ಹೊಂದಿರುವ ವಿದ್ಯಾರ್ಥಿ ಸಾಧನೆಯ ಮೆಟ್ಟಲು ಹತ್ತಲು ಸಾಧ್ಯ. ಈ ನಿಟ್ಟಿನಲ್ಲಿ ಉತ್ತಮವಾಗಿ ಕಲಿತು ಶಾಲೆಗೂ, ಗ್ರಾಮಕ್ಕೂ ಹೆಸರು ತನ್ನಿ ಎಂದರು. ಮುನಿಶಾಮಯ್ಯ, ಎಸ್.ವೈ ನಾಗರಾಜ್ ಮತ್ತಿತರರು ಮಾತನಾಡಿದರು. ಶ್ರೀನಿವಾಸ್,ಉಮೇಶ್ ಗೌರವಿಸಲಾಯಿತು. ಆಶ್ವತ್ಥ್, ಶಾರದ ಹೆಗಡೆ, ಕಲಾ, ಮಲ್ಲಿಕಾ, ಅಂಬುಜಾ, ಮಲ್ಲಿಕಾ, ಸುಕನ್ಯ, ಮಂಜುಳಾ, ಕನಕಲತಾ, ಗಿರಿಜ, ಶೈಲಜಾ ಸೇರಿದಂತೆ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

