ಬೆಂಗಳೂರು ಗ್ರಾಮಾಂತರ

'ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ ಸರ್ಕಾರಿ ಶಾಲೆಗಳೇ ಮುಂಚೂಣಿಯಲ್ಲಿ'

Published On :

ಕ.ಪ್ರ. ವಾರ್ತೆ ಮಧುಗಿರಿ ಮಾ.20
ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ  ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಮುಂಚೂಣಿಯಲ್ಲಿವೆ ಎಂದು ಬಿಆರ್‌ಪಿ ನರಸರೆಡ್ಡಿ ಹೇಳಿದ್ದಾರೆ.
ತಾಲೂಕಿನ ದೊಡ್ಡೇರಿ ಹೋಬಳಿ ಲಿಂಗಸಂದ್ರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳು ಶೈಕ್ಷಣಿಕ ಪ್ರಗತಿಯಲ್ಲಿ ಹಿಂದೆ ಬೀಳದೆ ಕ್ರಿಯಾಶೀಲ ಶಿಕ್ಷಕರಿಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ಸುಧಾರಣೆಯಾಗುತ್ತಿದೆ. ಆದ ಕಾರಣ ಪೋಷಕರು ತಮ್ಮ ಮಕ್ಕಳನ್ನು ತಪ್ಪದೆ ಸರ್ಕಾರಿ ಶಾಲೆಗಳಿಗೆ ಸೇರಿಸಿ ಅಲ್ಲಿ ದೊರೆಯುವ ಎಲ್ಲ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಕಲಿಯಲು ಪ್ರೋತ್ಸಾಹಿಸಬೇಕು  ಎಂದರು. ಅಧ್ಯಕ್ಷೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸಾಂಸ್ಕೃತಿಕ ಚಟುವಟಿಕೆ ನಡೆಸುವಲ್ಲಿ ನಮ್ಮ ಶಾಲೆ ಒಂದು ಹೆಜ್ಜೆ ಮುಂದಿದೆ ಎಂದರು. ಮುಖ್ಯ ಅತಿಥಿ ಟಿ.ಸಿ.ದಾಸಪ್ಪ ಈ ಶಾಲೆಯ ಶಿಕ್ಷಕರ ಮುತುವರ್ಜಿ ವಹಿಸಿದ ಹಿನ್ನೆಲೆಯಲ್ಲಿ ಇಂತಹ ಅದ್ಭುತ ಕಾರ್ಯಕ್ರಮ ನಡೆಸಲು ಸಾಧ್ಯವಾಯಿತು. ಎಂದರು.ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.