ನೀರು ಉಳಿಸಿ ಜಾಗೃತಿಗಾಗಿ ಸೈಕಲ್ ಜಾಥಾ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಮಾ.21
ನೀರು ಉಳಿಸಿ ಆಂದೋಲನದ ಅಡಿಯಲ್ಲಿ ಜನಜಾಗೃತಿಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಶೇಷಾದ್ರಿಪುರಂ ಶಿಕ್ಷಣ ದತ್ತಿ ಹಮ್ಮಿಕೊಂಡಿದ್ದು, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಾಪುರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ.ಕಾರ್ಯದರ್ಶಿ ಡಾ.ಮೊಡೇ ಪಿ.ಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನೀರು ಇಂದು ಅತ್ಯಮೂಲ್ಯ ಸಂಪತ್ತಾಗಿದೆ. ಮಿತ ಬಳಕೆ ಮತ್ತು ಸಂರಕ್ಷಣೆಗೆ ಈಗ ಒತ್ತು ನೀಡಲೇಬೇಕಾದ ಅನಿವಾರ್ಯತೆ ಇದ್ದು ತಪ್ಪಿದಲ್ಲಿ ಭವಿಷ್ಯ ಕರಾಳವಾಗಲಿದೆ ಎಂದರು.
ತಾ.ಪಂ ಸದಸ್ಯ ಡಾ.ವಿಜಯಕುಮಾರ್, ಗ್ರಾ.ಪಂ ಅಧ್ಯಕ್ಷ ಲೋಕೇಶ್, ಹಳ್ಳಿ ಜನಪದ ತಂಡದ ಹಾಡೋನಹಳ್ಳಿ ನಾಗರಾಜ್, ಕಂಟನಕುಂಟೆ ಅಶ್ವತ್ಥ್ ಮತ್ತಿತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ರಾಮಣ್ಣನ ಬಾವಿ ವೀಕ್ಷಣೆ, ಕಂಟನಕುಂಟೆ ಮತ್ತು ಹಾಡೋನಹಳ್ಳಿ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ನಂತರ ಅರ್ಕಾವತಿ ನದಿ ಉಗಮ ಸ್ಥಾನಕ್ಕೆ ತೆರಳಿ ಕಲ್ಲಣ್ಣನಬಾವಿ ಸ್ವಚ್ಛ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಎನ್ಎಸ್ಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಮತ್ತಿತರರಿದ್ದರು. ಯಲಹಂಕದ ಶೇಷಾದ್ರಿಪುರಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

