ಬೆಂಗಳೂರು ಗ್ರಾಮಾಂತರ

ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ

Published On :

ಕ.ಪ್ರ. ವಾರ್ತೆ ರಾಮನಗರ ಮಾ.23
ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ  ದೈಹಿಕ ಮತ್ತು ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವಂತೆ ಸರ್ಕಾರಿ ನೌಕರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ  ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ದೇಹ ಹಗುರಾಗಿ ಮನಸ್ಸು ಉಲ್ಲಸಿತವಾಗುತ್ತದೆ. ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.
ನೌಕರರು ದೈಹಿಕ ಹಾಗೂ ಮಾನಸಿಕ ಆರೋಗ್ಯವಾಗಿರಲು ಕ್ರೀಡೆಯು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಮನುಷ್ಯ ಎಷ್ಟು ವರ್ಷ ಬದುಕಿದ ಎಂಬುದಕ್ಕಿಂತ ಹೇಗೆ ಬದುಕಿದ ಎಂಬುದೇ ಬಹಳ ಮುಖ್ಯ. ಪ್ರತಿಯೊಬ್ಬರು ಜೀವನದಲ್ಲಿ ಕ್ರೀಡೆ ಮತ್ತು ವ್ಯಾಯಾಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.
ಕ್ರೀಡಾ ಮನೋಭಾವ ಅಗತ್ಯ: ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು-ಗೆಲವು ಪ್ರಮುಖವಾಗಬಾರದು. ನೌಕರರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಸಲಹೆ ನೀಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಒತ್ತಡದಲ್ಲಿದ್ದಾರೆ. ಕ್ರೀಡಾಕೂಟಗಳಲ್ಲಿ ಭಾವಹಿಸುವುದರಿಂದ ಒತ್ತಡವನ್ನು ನಿವಾರಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಹೇಳಿದರು.
ಕ್ರೀಡಾಕೂಟದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಿ.ನವಜ್ಯೋತಿ, ನಗರಸಭೆ ಆಯುಕ್ತ ಯಶವಂತ್, ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ವೈ.ಟಿ.ಸೋಮಶೇಖರಯ್ಯ, ಆರ್.ಕೆ.ಭೈರಲಿಂಗಯ್ಯ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಯ್ಯ, ಮುರಳಿಧರ್ ಮತ್ತಿತರರು ಭಾಗವಹಿಸಿದ್ದರು.

ಕಸಾಯಿಗೆ ಸಾಗಿಸುತ್ತಿದ್ದ 14 ಹಸುಗಳ ರಕ್ಷಣೆ, ಒಬ್ಬನ ಬಂಧನ
ನೆಲಮಂಗಲ:
ಹಾವೇರಿಯಿಂದ ನಗರದ ಕಸಾಯಿ ಖಾನೆಯೊಂದಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 14 ಹಸುಗಳನ್ನು ರಕ್ಷಿಸಿ, ಒಬ್ಬನನ್ನು ಬಂಧಿಸುವಲ್ಲಿ ನೆಲಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ.
ವಾಹನದ ಚಾಲಕ ಪರಶುರಾಮ ಬಂದಿತ ಆರೋಪಿಯಾಗಿದ್ದು, ಪರಾರಿಯಾಗಿರುವ ಇಬ್ಬರ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಂಗಲ ವ್ಯಾಪ್ತಿಯಲ್ಲಿನ ಜಾಸ್ ಟೋಲ್ ಎಂಬಲ್ಲಿ ನಿನ್ನೆ ರಾತ್ರಿ ತಪಾಸಣೆ ನಡೆಸುತ್ತಿದ್ದ ವೇಳೆ 14 ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಹಸುಗಳನ್ನು ಹಾವೇರಿಯಿಂದ ಶಿವಾಜಿನಗರ ಕಸಾಯಿ ಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
 ಹಸುಗಳನ್ನು ರಕ್ಷಿಸಿ ಕೋರಮಂಗಲದ ಪ್ರಾಣಿ ದಯಾ ಸಂಘಕ್ಕೆ ಒಪ್ಪಿಸಿ ಆರೋಪಿಗಳ ವಿರುದ್ಧ ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ನವೀನ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.