ಅಕ್ರಮ ಮಣ್ಣು ಸಾಗಣೆ: ಲಾರಿ ವಶ
ಮಾಗಡಿ: ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿದ್ದ 5 ಟಿಪ್ಪರ್ ಲಾರಿ ಮತ್ತು 2 ಹಿಟಾಚಿ ಯಂತ್ರವನ್ನು ತಹಸೀಲ್ದಾರ್ ಡಾ. ಹರೀಶ್ ನಾಯಕ್ ವಶ ಪಡಿಸಿಕೊಂಡಿದ್ದಾರೆ. ತಾಲೂಕಿನ ನಾರಸಂದ್ರ ಸರ್ವೆ ನಂಬರ್ 359, 360 ಮತ್ತು 316 ರ ಹಿಡುವಳಿ ಮತ್ತು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡಲಾಗುತ್ತಿತ್ತು. ತಹಸೀಲ್ದಾರ್ ಡಾ.ಹರೀಶ್ ನಾಯಕ್ ಮಾರ್ಗದರ್ಶನದಲ್ಲಿ ರೆವಿನ್ಯೂ ಅಧಿಕಾರಿಗಳಾದ ಮಹಾಲಿಂಗಪ್ಪ, ವಿಜಯಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಮೋಹನ್ ಕುಮಾರ್, ರೇವಣ್ಣ, ವೆಂಕಟರಂಗಯ್ಯ ನೇತೃತ್ವದ ತಂಡ ಅಕ್ರಮವಾಗಿ ಮಣ್ಣು ತುಂಬಿದ ಟಿಪ್ಪರ್ ಲಾರಿಗಳನ್ನು ಮತ್ತು ಹಿಟಾಚಿ ಯಂತ್ರಗಳನ್ನು ಹಿಡಿದು ವಶಕ್ಕೆ ತೆಗೆದುಕೊಂಡಿದ್ದಾರೆ. ಅಕ್ರಮವಾಗಿ ತೆಗೆದ ಮಣ್ಣನ್ನು ರೇಲ್ವೆ ಕಾಮಗಾರಿಗೆ ಬಳಸಲಾಗುತ್ತಿದ್ದರು ಎನ್ನಲಾಗಿದೆ. ವಶವಡಿಸಿಕೊಂಡಿರುವ ಲಾರಿ ಮತ್ತು ಹಿಟಾಚಿಗಳನ್ನು ಸೋಲೂರು ಪೊಲೀಸ್ ಠಾಣೆ ಬಳಿ ಕೊಂಡೊಯ್ಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಂಬಂಧಪಟ್ಟ ಲಾರಿ ಮಾಲೀಕರಿಗೆ ಹಾಗೂ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿ, ದಂಡ ಹಾಕಲಾಗುವುದು ಎಂದು ತಹಸೀಲ್ದಾರ್ ತಿಳಿಸಿದರು. ತಾಲೂಕಿನಲ್ಲಿ ಏಗ್ಗಿಲ್ಲದೆ ನಡೆಯುತ್ತಿರುವ ಮರಳು ದಂಧೆ, ಮಣ್ಣು ದಂದೆ, ಅಕ್ರಮ ಕ್ರಷರ್ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಸದ್ಯದಲ್ಲೇ ದಾಳಿ ಮಾಡಿ ಕ್ರಿಮಿನಲ್ ಮೊಕದ್ದಮ್ಮೆ ದಾಖಲು ಮಾಡಲಾಗುವುದು ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

