ಬೆಂಗಳೂರು ಗ್ರಾಮಾಂತರ

ರಾಮಾಯಣ ದರ್ಶನಂ ವಾಚನ ಸ್ಪರ್ಧೆ

Published On :

ಕನಕಪುರ: ಕನಕಪುರದ ರೂರಲ್ ಪದವಿ ಕಾಲೇಜಿನ ಸುಬ್ಬರಾವ್ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ಶ್ರೀ ರಾಮಾಯಣ ದರ್ಶನಂ ವಾಚನ ಸ್ಪರ್ಧೆ ಹಾಗೂ ಕನ್ನಡ ಭಾವಗೀತ ಗಾಯನ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ವಿವಿ ಪ್ರಾಧ್ಯಾಪಕ, ವಿಮರ್ಶಕ ಡಾ.ಎನ್.ಎಸ್. ತಾರಾನಾಥ್‌ನೆರವೇರಿಸಿದರು. ಗ್ರಾಮವಿದ್ಯಾ ಪ್ರಚಾರಕಸಂಘದ ಅಧ್ಯಕ್ಷ ಕೆ.ಜಿ. ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಜಗತ್ತು ಇಂದು ಅತ್ಯಂತ ವೇಗವಾಗಿ ಬದಲಾವಣೆಯ ಪಲ್ಲಟಕ್ಕೆ ಒಳಗಾಗುತ್ತಿದೆ, ವಿದ್ಯಾರ್ಥಿಗಳು ನವೀನ ಜಗತ್ತಿನ ಜ್ಞಾನವನ್ನು ರೂಢಿಸಿಕೊಳ್ಳಬೇಕು, ಉತ್ತಮ ನಡೆನುಡಿ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತಿಯನ್ನು ಹೊಂದಬೇಕು ಎಂದು ಡಾ.ತಾರಾನಾಥ್ ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.