ರಾಮನಗರ: 2013ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಪಟ್ಟಂತೆ 18 ವರ್ಷ ಮೇಲ್ಪಟ್ಟವರು ಮತಪಟ್ಟಿಯಲ್ಲಿ ತಮ್ಮ ಹೆಸರನ್ನು ಮೊದಲ ಬಾರಿಗೆ ಸೇರ್ಪಡೆಗೊಳಿಸಲು ನಮೂನೆ 6, ಮತಪಟ್ಟಿಯಲ್ಲಿರುವ ಹೆಸರನ್ನು ತೆಗೆದುಹಾಕಲು ನಮೂನೆ 7, ಹೆಸರನ್ನು ತಿದ್ದುಪಡಿ ಮಾಡಲು ನಮೂನೆ 8 ಹಾಗೂ ಹೆಸರನ್ನು ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ 8ಎ ರಲ್ಲಿ ಏ.7ರೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಮತಗಟ್ಟೆ ಅಧಿಕಾರಿ, ಹೋಬಳಿಯ ನಾಡಕಚೇರಿ ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ತಾಲೂಕು ತಹಸೀಲ್ದಾರ್, ಉಪ ವಿಭಾಗಾಧಿಕಾರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನವೀನ್ರಾಜ್ ಸಿಂಗ್ ತಿಳಿಸಿದ್ದಾರೆ.