ಆಮಿಷಕ್ಕೆ ಬಲಿಯಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಿಕೊಳ್ಳಬೇಡಿ
ವಿಜಯಪುರ: ಆಮಿಷಕ್ಕೆ ಬಲಿಯಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಿ ಕೊಳ್ಳಬೇಡಿ ಎಂದು ಟೌನ್ ಯುವ ಕಾಂಗ್ರೆಸ್ ಅಧ್ಯಕ್ಷ ಹರೀಶ್ ತಿಳಿಸಿದರು.
ಅವರು ಪಟ್ಟಣದ ಬಸ್ ನಿಲ್ದಾಣದ ಬಳಿಯ ವೆಂಕಟರಮಣ ಸ್ವಾಮಿ ದೇವಾಲಯದ ಮಹಾದ್ವಾರದ ಬಳಿಯಿಂದ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೊರಡಲು ಸಿದ್ಧವಾಗಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಕಳೆದ 5 ವರ್ಷಗಳಿಂದ ಕ್ಷೇತ್ರದ ಶಾಸಕರಾಗಿರುವ ವೆಂಕಟಸ್ವಾಮಿ ಸರ್ಕಾರದಿಂದ 450ಕೋಟಿ ರು.ಗಳಿಗೂ ಹೆಚ್ಚಿನ ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇದರೊಂದಿಗೆ ಸಚಿವ ವೀರಪ್ಪ ಮೊಯ್ಲಿ ಅವರ ನೇತೃತ್ವದಲ್ಲಿ ಶಿಕ್ಷಣ ಪಡೆದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಿರುದ್ಯೋಗ ಸಮಸ್ಯೆ ಕಾಡದಂತೆ ನೋಡಿಕೊಳ್ಳುವ ಭರವಸೆ ಇದೆ. ಆದ್ದರಿಂದ ಮತದಾರರು ತಮಗಾಗಿರುವ ಅಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಯೋಚಿಸಿ ಕಾಂಗ್ರೆಸ್ಗೆ ಮತನೀಡಿ ಎಂದು ತಿಳಿಸಿದರು.
ಪಟ್ಟಣದ ರಸ್ತೆಗಳಲ್ಲಿ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ ಯುವಕರು ಮತದಾರರು ಯಾವುದೇ ಅಮಿಷಕ್ಕೆ ಬಲಿಯಾಗದೆ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ನಾಯಕನನ್ನು ಅರಿಸುವ ಗುರಿಯನ್ನು ಹೊಂದಿ ಎಂಬ ಘೋಷಣೆಯೊಂದಿಗೆ ರ್ಯಾಲಿಯನ್ನು ಯಶಸ್ವಿಗೊಳಿಸಿದರು.
ಟೌನ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್, ಬಾಬು, ಮೂರ್ತಿ,ರಮೇಶ್, ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

