ಬೆಂಗಳೂರು ಗ್ರಾಮಾಂತರ

ಬಿಜೆಪಿಯ ದುರಾಡಳಿತದಿಂದ ಪ್ರಗತಿ ಕುಂಠಿತ: ಓಮನ್ ಚಾಂಡಿ

Published On :

ಯಲಹಂಕ: ಬಿಜೆಪಿಯ ದುರಾಡಳಿತದಿಂದ ಕಳೆದ ಐದು ವರ್ಷದಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಕಾಂಗ್ರೆಸ್‌ನಿಂದ ಮಾತ್ರ ಅದನ್ನು ಸರಿಪಡಿಸಿ ಮತ್ತೆ ಅಭಿವೃದ್ಧಿ ತರಲು ಸಾಧ್ಯ ಎಂದು ಕೇರಳ ಮುಖ್ಯಮಂತ್ರಿ ಓಮನ್ ಚಾಂಡಿ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ ಪರ ದೊಡ್ಡಬೊಮ್ಮಸಂದ್ರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಮತ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಕಳೆದ 5 ವರ್ಷದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಭ್ರಷ್ಟ ವ್ಯವಸ್ಥೆ ತೊಲಗಿ ರಾಜ್ಯದಲ್ಲಿ ಸುಭದ್ರ ಹಾಗೂ ಸಮರ್ಥ ಆಡಳಿತ ನಡೆಸಲು ಕಾಂಗ್ರೆಸ್ ಪರ್ಯಾಯವಾಗಿದ್ದು, ಹಾಗಾಗಿ, ಮತದಾರರು ಈ ಬಾರಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಹೇಳಿದರು.
ಅಭ್ಯರ್ಥಿ ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಎಂ.ಆರ್.ಸೀತಾರಾಂ, ಕೇರಳ ಸಂಸದ ಆ್ಯಂಟನಿ, ಶಾಸಕ ಪಿ.ಸಿ.ವಿಷ್ಣುನಾದ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.