ಕಡ್ಡಾಯ ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವುದಕ್ಕೆ ಸಹಕಾರಿ
ಕ.ಪ್ರ.ವಾರ್ತೆ ರಾಮನಗರ ಮೇ 2
ಕಡ್ಡಾಯ ಮತದಾನವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ನಗರದ ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಎ.ಗೋಪಾಲ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಕಾನೂನು ಕಾಲೇಜಿನ ಭಾರತೀಯ ರೆಡ್ ಕ್ರಾಸ್ ಘಟಕದಿಂದ ನಡೆದ ಮತದಾನದ ಮಹತ್ವ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.
ತಾವು ಮತದಾನ ಮಾಡುವುದಲ್ಲದೆ ಮತದಾನದಿಂದ ಹೊರಗುಳಿದವರನ್ನೂ ಪ್ರೇರೇಪಿಸಿ, ಪ್ರತಿಶತ ನೂರರಷ್ಟು ಮತದಾನ ಆಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾವಂತರ ಹೊಣೆಯಾಗಿದೆ ಎಂದು ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಸಹ ಪ್ರಾಧ್ಯಾಪಕ ಡಾ.ಹನುಮಂತಯ್ಯ, ಮತದಾನ ಬೆಳೆದು ಬಂದ ರೀತಿಯನ್ನು ವಿವರಿಸಿ ಪ್ರಸ್ತುತ ಸಂದರ್ಭದಲ್ಲಿ ಎಲ್ಲಾ ದಾನಗಳಿಗಿಂತ ಮತದಾನ ತೀರಾ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾಲೇಜಿನ ರೆಡೆಕ್ರಾಸ್ ಘಟಕದ ಸಂಯೋಜಕ ಚನ್ನಂಕೇಗೌಡ ಮಾತನಾಡಿ, ಅನಕ್ಷರಸ್ಥ ಮತದಾರರರಿಗಿಂತ ಅಕ್ಷರಸ್ಥ ಮತದಾರರು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಇನ್ನಾದರೂ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕು ಎಂದರು.
ಎಚ್.ಬಿ.ಶಿವಣ್ಣ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಕಾಲೇಜಿನ ಅಧ್ಯಾಪಕರಾದ ಅಂಬೇಡ್ಕರ್, ನಂದೀಶ್, ರಂಗನಾಥಯ್ಯ, ಗಿರೀಶ್, ಶೈಲಜ, ಎಚ್.ಜಯಣ್ಣ ಉಪಸ್ಥಿತರಿದ್ದರು. ಮಂಜುನಾಥ್ ಸ್ವಾಗತಿಸಿದರು, ಹೇಮಾವತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

