ಬೆಂಗಳೂರು ಗ್ರಾಮಾಂತರ

ಬಿಜೆಪಿ ಅಭ್ಯರ್ಥಿ ಪರ ಸರ್ಕಾರಿ ನೌಕರರ ಪ್ರಚಾರ: ದೂರು

Published On :

ನೆಲಮಂಗಲ: ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಸರ್ಕಾರಿ ನೌಕರರು ಮತ್ತು ಶಾಲಾ ಶಿಕ್ಷಕರು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್  ಪಕ್ಷದ ಮುಖಂಡ ಭಾಸ್ಕರ್ ಪ್ರಸಾದ್ ಚುನಾವಣಾಧಿಕಾರಿ ಅಮರೇಶ್ ಅವರಿಗೆ ಗುರುವಾರ ದೂರು ನೀಡಿದ್ದಾರೆ.
ದೂರಿನಲ್ಲಿ ಸರ್ಕಾರಿ ನೌಕರರಾದ ತುರುವೇಕೆರೆ ತಾಲ್ಲೂಕಿನ ಕೆ.ಇ.ಎಸ್.ಡ್ರಾಯಿಂಗ್ ಆಫೀಸರ್ ಕೃಷ್ಣಪ್ಪ, ಶಿಕ್ಷಕರಾದ ತಿಮ್ಮರಾಜು, ಅಡೇಪೇಟೆ ಗೋವಿಂದರಾಜು, ನಾಗೇಶ್, ಶಿಕ್ಷಣ ಇಲಾಖೆಯ ಅಧಿಕಾರಿ ನಾಗರಾಜು  ಅವರು ಪ್ರಚಾರದಲ್ಲಿ ನಿರತರಾಗಿದ್ದಾಗ ತೆಗೆದಿರುವ  ವಿಡಿಯೋ, ಸಿಡಿ ಮತ್ತು ಪೋಟೋ ಪ್ರತಿಗಳನ್ನು ಈ ದೂರಿನೊಂದಿಗೆ ನೀಡಲಾಗಿದೆ.
ದೂರನ್ನು ಸ್ವೀಕರಿಸಿ ಚುನಾವಣಾಧಿಕಾರಿ ಅಮರೇಶ್ ಮಾತನಾಡಿ, ಸರ್ಕಾರಿ ನೌಕರರು ಹಾಗೂ ಶಿಕ್ಷಕರು ಪ್ರಚಾರದಲ್ಲಿ ಪಾಲ್ಗೊಂಡಿರುವ ಕುರಿತು ಸಂಬಂಧಪಟ್ಟ ಇಲಾಖೆಗೆ ಪತ್ರ ಮುಖೇನ ವ್ಯವಹರಿಸಿ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮುಖಂಡರಾದ ನಾಗರಾಜು, ನಾಗೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.