ರೇಷ್ಮೆ ಮಾರುಕಟ್ಟೆಯಲ್ಲಿ ಮತಯಾಚನೆ
ಕ.ಪ್ರ.ವಾರ್ತೆ ರಾಮನಗರ ಮೇ.2
ನೆರೆಯ ಚನ್ನಪಟ್ಟಣ ಕ್ಷೇತ್ರದ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಕಳೆದ ಸೋಮವಾರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಮತಯಾಚಿಸಿ ಗಮನ ಸೆಳೆದರೆ, ರಾಮನಗರದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಮತಯಾಚನೆ ನಡೆಸಿದರು.
ದಳಪತಿ ಕುಮಾರಸ್ವಾಮಿ ಅವರ ನೇರ ಪ್ರತಿಸ್ಪರ್ಧಿಯಾಗಿರುವ ಮರಿದೇವರು ಕಳೆದೊಂದು ವರ್ಷದಿಂದಲೇ ತಾಲೀಮು ಪ್ರಾರಂಭಿಸಿದ್ದವರು. ಕುಡಿವ ನೀರಿನ ಬವಣೆ ತಲೆದೋರಿದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ, ಅಗತ್ಯವಿರುವೆಡೆ ಸ್ವಂತ ಖರ್ಚಿನಲ್ಲಿ ಕೊಳವೆ ಬಾವಿಗಳನ್ನು ಕೊರೆಸಿಕೊಂಡು ಬಂದವರು.
ಈ ಮಧ್ಯೆ, ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಗೂಡು ಮಾರಾಟಕ್ಕೆ ಬಂದಿದ್ದ ರೈತರು, ಖರೀದಿಸುತ್ತಿದ್ದ ರೀಲರ್ಗಳು, ದಲ್ಲಾಳಿಗೂ ಮತ್ತು ಕೂಲಿ ಕಾರ್ಮಿಕರನ್ನು ಭೇಟಿಯಾಗಿ ಮತಭಿಕ್ಷೆ ಬೇಡಿದರು.
ಶ್ರಮಿಸುವೆ: ಈ ಬಾರಿ ಜನತೆ ಆಶೀರ್ವದಿಸಿದಲ್ಲಿ ರಾಮನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ. ರೇಷ್ಮೆ ಆಮದು ಸುಂಕ ಹೆಚ್ಚಳ, ರೇಷ್ಮೆ ಬೆಳೆಗಾರರು ಮತ್ತು ರೀಲರ್ಗಳಿಗೆ ಸಬ್ಸಿಡಿ ಸೌಲಭ್ಯಕ್ಕೆ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೈಲು ನಿಲ್ದಾಣದಲ್ಲಿ ಮತಯಾಚನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

