ಬೆಂಗಳೂರು ಗ್ರಾಮಾಂತರ

ಸರಬ್ಜಿತ್ ಸಿಂಗ್‌ಗೆ ಎಬಿವಿಪಿ ಸಂತಾಪ

Published On :

ರಾಮನಗರ: ಪಾಕಿಸ್ತಾನದ ಜೈಲಿನಲ್ಲಿ ಸಹಕೈದಿಗಳಿಂದ ಹಲ್ಲೆಗೊಳಗಾಗಿ ಸೂಕ್ತ ಚಿಕಿತ್ಸೆ ದೊರೆಯದೆ ಸಾವಿಗೀಡಾದ ಸರಬ್ಜಿತ್ ಸಿಂಗ್ ಅವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂತಾಪ ಸೂಚಿಸಿದೆ.  ಪಾಕಿಸ್ತಾನ ಸರ್ಕಾರವೇ ಉದ್ದೇಶಪೂರ್ವಕವಾಗಿ ಸಹಖೈದಿಗಳಿಂದ ಹಲ್ಲೆ ನಡೆಸಿ, ಚಿಕಿತ್ಸೆ ನೀಡುವಲ್ಲಿಯೂ ನಿರ್ಲಕ್ಷ್ಯ ವಹಿಸಿದೆ. ಇದರಿಂದ ಅಂತಾರಾಷ್ಟ್ರೀಯ ಕಾನೂನುಗಳಿಗೆ ಪಾಕಿಸ್ತಾನ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದು ಸಾಬೀತಾಗಿದೆ. ಅಲ್ಲದೆ ಭಾರತ ಸರ್ಕಾರವೂ ಕೂಡ ಸರಬ್ಜಿತ್ ಅವರನ್ನು ವಾಪಸ್ ಕರೆಸಿಕೊಳ್ಳುವಲ್ಲಿ ವಿಫಲವಾಗಿದ್ದು, ಸಾವಿಗೆ ಪರೋಕ್ಷ ಕಾರಣವಾಗಿದೆ. ಈ ವಿಷಯದಲ್ಲಿ ಸರಬ್ಜಿತ್ ಅವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ತಕ್ಷಣ ಎಚ್ಚೆತ್ತು  ಈ ವಿಷಯವನ್ನು ಗಂಬೀರವಾಗಿ ಪರಿಗಣಿಸಬೇಕು. ಪಾಕಿಸ್ತಾನದ ಜತೆ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿ, ಪಾಕಿಸ್ತಾನದ ಹೇಡಿ ಕೃತ್ಯಕ್ಕೆ ತಕ್ಕ ಉತ್ತರ ನೀಡಬೇಕೆಂದು ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸುನೀಲ್ ಕುಮಾರ್, ಜಿಲ್ಲಾ ಘಟಕದ ಪದಾಧಿಕಾರಿಗಳಾಧ ರಘುರಾಮ್, ಶಂಕರ್, ಅನಿಲ್ ಬಾಬು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.