ಎಲ್ಲ ವರ್ಗದ ಜನರ ಒಲವು ಜೆಡಿಎಸ್ ಪರ
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಅವರಿಗೆ ಎಲ್ಲ ಜನಾಂಗದ ಯುವಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಶುಕ್ರವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಎಸ್ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ 1987 ರಲ್ಲಿ ರಾಜಕೀಯ ಜೀವನ ಆರಂಭಿಸಿ ಮಂಡಲ ಪಂಚಾಯಿತಿ ಸದಸ್ಯರಾಗಿ, ನಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಎಲ್ಲ ಸಮುದಾಯಗಳ ಜನರಲ್ಲಿ ಗುರುತಿಸಿಕೊಂಡು ಆಜಾತ ಶತ್ರುವಾಗಿ ಬೆಳೆದಿದ್ದಾರೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ವೆಂಕಟಸ್ವಾಮಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 450 ಕೋಟಿ ರೂ ಅಭಿವೃದ್ಧಿ ಕೆಲಸಗಳಾಗಿವೆ ಎಂದು ಕರಪತ್ರಗಳ ಮೂಲಕ ಪ್ರಚಾರ ಮಾಡುತ್ತಾರೆ. ಆದರೆ, ವಾಸ್ತವವಾಗಿ ಇದು ಆಗಿಯೇ ಇಲ್ಲ ಎಂದರಲ್ಲದೆ ಮುದ್ದನಾಯಕನಹಳ್ಳಿಯಲ್ಲಿ ದೇವಸ್ಥಾನ ಮತ್ತು ರಸ್ತೆ ಕಾಮಗಾರಿ ಆಗಿರುವುದಾಗಿ ತಿಳಿಸಿದ್ದಾರೆ. ಈ ವಿಷಯವನ್ನು ಆ ಗ್ರಾಮದ ಜನರೇ ಪ್ರಶ್ನಿಸುತ್ತಾರೆ ಎಲ್ಲಿ ಕೆಲಸ ಆಗಿದೆ ಎಂದು ಪ್ರತಿರೋಧ ವ್ಯಕ್ತಪಡಿಸಿದ್ದಾರೆ ಎಂದು ನಾರಾಯಣಸ್ವಾಮಿ ತಿಳಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಜಿ.ಪಂ.ಸದಸ್ಯ ಬಿ.ಎಂ.ಬೀರಪ್ಪ, ಮಾಜಿ ಸದಸ್ಯರಾದ ಬಸವರಾಜು, ವೀರಪ್ಪ, ಎಸ್. ಗುರಪ್ಪ, ಬಿ.ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸಿ.ಮುನಿರಾಜು, ಮುನಿನಂಜಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

