ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

Published On :

ಮಾಗಡಿ: ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಮೇಲೆ  ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಲಕ್ಕೇನಹಳ್ಳಿ ಹ್ಯಾಂಡ್ ೆಪೋಸ್ಟ್ ಬಳಿ ಶುಕ್ರವಾರ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಹಲ್ಲೆಗೊಳಗಾಗಿದ್ದು, ಗಾಯಾಳು  ಉಮೇಶ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿಲಾಗಿದೆ.  ಜೆಡಿಎಸ್ ಕಾರ್ಯಕರ್ತರಾದ ಸೋಲೂರು ಗ್ರಾ.ಪಂ.ಸದಸ್ಯ ಗೋಪಾಲ್, ನೆಲಮಂಗಲದ ಕಾಂತರಾಜು, ಹನುಮಂತರಾಜು ಇತರರು ಎಂದು ಗಾಯಳು ಉಮೇಶ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಉಮೇಶ್ ತಿಳಿಸಿದ್ದಾರೆ.    


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.