ಬೆಂಗಳೂರು ಗ್ರಾಮಾಂತರ

ಮತದಾನ ಕೇಂದ್ರಕ್ಕೆ ತೆರಳಿದ ಅಧಿಕಾರಿಗಳು

Published On :

ಕ.ಪ್ರ.ವಾರ್ತೆ  ದೇವನಹಳ್ಳಿ  ಮೇ 4
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 260 ಮತಗಟ್ಟೆಗಳಲ್ಲಿ ಭಾನುವಾರ ಮತದಾನ ನಡೆಯಲಿದ್ದು ಶನಿವಾರ ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ 1165 ಮತಗಟ್ಟೆ ಅಧಿಕಾರಿಗಳಿಗೆ ಮತದಾನ ಯಂತ್ರ ಹಾಗೂ ಇತರ ಅಗತ್ಯ ಪರಿಕರಗಳನ್ನು ಚುನಾವಣಾ ಅಧಿಕಾರಿಗಳು ವಿತರಣೆ ಮಾಡಿದರು.  ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 185157 ಮತದಾರರಿದ್ದು 260 ಮತಗಟ್ಟೆಗಳಲ್ಲಿ 112 ಸೂಕ್ಷ್ಮ ಹಾಗೂ 47 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು  ಚುನಾವಣಾಧಿಕಾರಿಗಳಾದ ಆರ್.ಸುಮ ಅವರು ತಿಳಿಸಿದ್ದಾರೆ.  ಭಾರತ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆ ಸಮಯ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆವಿಗೂ ನಿಗದಿ ಮಾಡಿತ್ತು. ಆದರೆ ಮತದಾನದಲ್ಲಿ ಎಲ್ಲ ವರ್ಗದ ಜನರು ಮತದಾನ ಮಾಡಲು ಅನುಕೂಲವಾಗುವಂತೆ   ಚುನಾವಣಾ ಆಯೋಗ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೂ (ಒಂದು ಗಂಟೆ ವಿಸ್ತರಣೆ) ಮತದಾನ ಮಾಡಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.