ಬೆಂಗಳೂರು ಗ್ರಾಮಾಂತರ

ಅತ್ತಿಬೆಲೆಯಲ್ಲಿ ಘರ್ಷಣೆ; 6 ಮಂದಿಗೆ ಗಾಯ

Published On :

ಕ.ಪ್ರ.ವಾರ್ತೆ   ಸೂಲಿಬೆಲೆ   ಮೇ 5
ಸಮೀಪದ ಅತ್ತಿಬೆಲೆ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆಯಾಗಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರು ಹೊಸಕೋಟೆ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದಾರೆ.
ಅತ್ತಿಬೆಲೆ ಗ್ರಾಮದಲ್ಲಿರುವ ಗ್ರಾಪಂನ ಬಿಜೆಪಿ ಬೆಂಬಲಿತ ಸದಸ್ಯ ನಾಗೇಶ ಅವರಿಗೆ ಸೇರಿದ ಮನೆಯ ಮೇಲೆ ಗುಂಪೊಂದು ಕಲ್ಲು, ಇಟ್ಟಿಗೆ ಇತ್ಯಾದಿ ವಸ್ತುಗಳಿಂದ ದಾಳಿ ಮಾಡಿದ್ದು, ಮನೆಯ ಬಾಗಿಲು, ಬೈಕ್ ಜಖಂಗೊಂಡಿವೆ. ಈ ವೇಳೆ ದಾಳಿಗೆ ಪ್ರತಿಯಾಗಿ ಮತ್ತೊಂದು ಗುಂಪು ಪ್ರತಿ ದಾಳಿ ನಡೆಸಿ ಎರಡೂ ಗುಂಪುಗಳ ನಡುವೆ ಘರ್ಷಣೆಯಾಗಿದೆ. ಘಟನೆಯಲ್ಲಿ ಮಂಜುನಾಥ್, ದೇವೇಗೌಡ, ಗಂಗಾಧರ್, ಕೃಷ್ಣಮೂರ್ತಿ, ನಾಗರಾಜ್, ಸುರೇಶ್ ಗೌಡ ಎಂಬವರಿಗೆ ಗಂಭೀರವಾದ ಗಾಯಗಳಾಗಿವೆ.
ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ನಾಗೇಶ್ ಮತ್ತು ಮುರಳೀಧರ್ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದು, ಘಟನೆಗೆ ಕಾಂಗ್ರೆಸ್ ಮುಖಂಡರ ಕುಮ್ಮಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡ ರಾಮಣ್ಣ ಪ್ರತಿ ದೂರು ನೀಡಿದ್ದು, ಬಿಜೆಪಿಯಿಂದ ಕಾಂಗ್ರೆಸ್‌ಗೆ ಎರಡು ಕುಟುಂಬದವರು ಪಕ್ಷಾಂತರ ಮಾಡಿರುವುದನ್ನು ಸಹಿಸದೇ ನಮಗೆ ಸೇರಿದ ವಾಹನ ಮತ್ತು ಮೂವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.