ದೊಡ್ಡಬಳ್ಳಾಪುರ: ಚುನಾವಣೋತ್ತರ ಘರ್ಷಣೆ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ ಮೇ 6
ದೊಡ್ಡಬಳ್ಳಾಪುರ ತಾಲೂಕಿನ ಸೀಗೇಹಳ್ಳಿ ಗ್ರಾಮದಲ್ಲಿ ಚುನಾವಣೋತ್ತರ ಘರ್ಷಣೆ ನಡೆದಿದೆ. ಭಾನುವಾರ ರಾತ್ರಿ ರಾಜಕೀಯ ವೈಷಮ್ಯ ಭುಗಿಲೆದ್ದಿದೆ. ತಮ್ಮ ಪಕ್ಷಕ್ಕೆ ಮತ ಹಾಕಿಲ್ಲ ಎಂಬ ಕಾರಣಕ್ಕಾಗಿ ಆಕ್ರೋಶಿತರಾದ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ 2 ಮನೆಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಯತ್ನಿಸಿ ಕಲ್ಲುತೂರಿದ ಘಟನೆಯೂ ನಡೆದಿದೆ.
ಬಾಗಿಲು ತೆರೆಯದ ಕಾರಣ ಮನೆಗಳ ಛಾವಣಿಗಳ ಮೇಲೆ ಮತ್ತು ಕಿಟಕಿ-ಬಾಗಿಲುಗಳ ಮೇಲೂ ಕಲ್ಲು ತೂರಿದ್ದು, ಛಾವಣಿಗಳು ಜಖಂಗೊಂಡು, ಕಿಟಕಿ ಗಾಜುಗಳು ಒಡೆದಿವೆ. ಸೀಗೇಹಳ್ಳಿ ಗ್ರಾಮದ ಜೆಡಿಎಸ್ ಕಾರ್ಯಕರ್ತರಾದ ಸತೀಶ್ ಮತ್ತು ಚಂದ್ರಪ್ಪ ಎಂಬುವವರು ಮನೆಯಲ್ಲಿಲ್ಲದ ವೇಳೆ ಸಮೀಪದ ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷ ಸುಬ್ರಹ್ಮಣಿ ಮತ್ತು ಸೀಗೇಹಳ್ಳಿ ಗ್ರಾಮದ ಕೆಲ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆಯಲ್ಲಿ ಚಂದ್ರಪ್ಪ ಎಂಬುವವರ ಮನೆ ಮುಂಭಾಗ ಇದ್ದ ಹುಲ್ಲುಮೆದೆಗೆ ಬೆಂಕಿ ಹಚ್ಚಿದಾಗ ಬಾಗಿಲು ತೆರೆದು ಹೊರಬಂದ ಆತನ ಪತ್ನಿ ಪ್ರಶ್ನಿಸಿದ ವೇಳೆ ಆಕೆ ಮೇಲೂ ಕೂಡ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿ ಸುಬ್ರಹ್ಮಣಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಗ್ರಾಮಂತರ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

