ಬೆಂಗಳೂರು ಗ್ರಾಮಾಂತರ

ಡಿ.ಕೆ.ಶಿವಕುಮಾರ್, ಪತ್ನಿ ಮತ ಅಸಿಂಧು

Published On :

ಬೆಂಗಳೂರು: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಸಂದರ್ಭದಲ್ಲಿ ಪತ್ನಿ ಜತೆ ತೆರಳಿ ಮತದಾನ ಮಾಡಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿಯ ಮತವನ್ನು ಅಸಿಂಧುಗೊಳಿಸಿದೆ.
ಮತದಾನ ಸಂದರ್ಭದಲ್ಲಿ ಗೌಪ್ಯತೆ ಕಾಪಾಡಬೇಕೆಂಬ ನಿಯಮವಿದ್ದರೂ ಶಿವಕುಮಾರ್ ತಮ್ಮ ಪತ್ನಿ ಜತೆ  ತೆರಳಿ ಒಟ್ಟಾಗಿ ಮತ ಚಲಾಯಿಸಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಜತೆ ಚರ್ಚೆ ನಡೆಸಿರುವ ರಾಜ್ಯ ಚುನಾವಣಾ ಅಧಿಕಾರಿಗಳು ಶಿವಕುಮಾರ್ ಮತ್ತು ಅವರ ಪತ್ನಿ ಮತವನ್ನು ಅಸಿಂಧುಗೊಳಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ರಾಮನಗರ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.