ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಜಯಭೇರಿ

Published On :

ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಕಾಂಗ್ರೆಸ್‌ನ ಟಿ.ವೆಂಕಟರಮಣಯ್ಯ ಆಯ್ಕೆಯಾಗಿದ್ದಾರೆ.
ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಬಿ.ಮುನೇಗೌಡ ವಿರುದ್ಧ 1447 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಸಿ.ಚನ್ನಿಗಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಸಿಪಿಐ (ಎಂ), ಕೆಜೆಪಿ, ಬಿಎಸ್ಪಿ, ಬಿಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳಲೂ ವಿಫಲರಾಗಿದ್ದಾರೆ.



ಅಭ್ಯರ್ಥಿಗಳು ಪಡೆದ ಮತಗಳ ವಿವರ
ಟಿ.ವೆಂಕಟರಮಣಯ್ಯ    (ಕಾಂಗ್ರೆಸ್)    38877,
ಬಿ.ಮುನೇಗೌಡ    (ಪಕ್ಷೇತರ)    37430,
ಸಿ.ಚನ್ನಿಗಪ್ಪ    (ಜೆಡಿಎಸ್)    34628,
ಜೆ.ನರಸಿಂಹಸ್ವಾಮಿ    (ಬಿಜೆಪಿ)    32753,
ವಿ.ನಾಗೇಂದ್ರಪ್ರಸಾದ್    (ಕೆಜೆಪಿ)    1517,
ಪುರುಷೋತ್ತಮ್    (ಬಿಎಸ್ಪಿ)    1439,
ಆರ್.ಚಂದ್ರತೇಜಸ್ವಿ    (ಸಿಪಿಐಎಂ)    984,
ಸಿ.ಕುಮಾರ್    (ಬಿಎಸ್‌ಆರ್)    674.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.