ಅಭಿವೃದ್ಧಿ ಬೆಂಬಲ: ಡಿಕೆಶಿ
ಕ.ಪ್ರ.ವಾರ್ತೆ ಕನಕಪುರ ಮೇ 9
ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಮರು ಆಯ್ಕೆಗೊಂಡ ಸುದ್ದಿ ಪ್ರಕಟವಾಗುತ್ತಿದ್ದಂತೆ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆಎಸ್ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ಪರಸ್ಪರ ಶುಭಾಷಯಗಳನ್ನು ಕೋರುತ್ತಾ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಶಿವಕುಮಾರ್ ಅವರಿಗೆ ಜಯಕಾರ ಹಾಕುತ್ತಾ ಸಂಭ್ರಮಿಸಿದರು. ಪಟಾಕಿಗಳ ಸರಮಾಲೆಯನ್ನು ಸಿಡಿಸಿ, ಸಿಹಿಹಂಚಿ, ನಗರದ ಪ್ರಮುಖ ಬೀದಿಗಳಲ್ಲಿ ಜೈಕಾರ ಹಾಕುತ್ತಾ ಸಂಚರಿಸಿದರು. ಶಾಸಕ ಡಿ.ಕೆ.ಶಿವಕುಮಾರ್ ಮಾತನಾಡಿ, ಕನಕಪುರದ ಜನತೆ ಅಭಿವೃದ್ಧಿಯನ್ನು ಬೆಂಬಲಿಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಗೋಚರವಾಗಿದೆ. 32 ಸಾವಿರ ಬಹುಮತ ನೀಡಿದ ಕನಕಪುರದ ಜನತೆ ಜವಾಬ್ದಾರಿಯನ್ನು ಹೆಚ್ಚಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ ಅತಂತ್ರ ಸ್ಥಿತಿಯನ್ನು ತಪ್ಪಿಸಿದ್ದಾರೆ. ತಮ್ಮನ್ನು ಅಭೂತಪೂರ್ವವಾಗಿ ಬೆಂಬಲಿಸಿದ ಕನಕಪುರ ಜನತೆಗೆ ಶಾಸಕ ಶಿವಕುಮಾರ್ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ವಾರದೊಳಗಾಗಿ ಕನಕಪುರದಲ್ಲಿ ಅದ್ಧೂರಿಯಾಗಿ ವಿಜಯೋತ್ಸವವನ್ನು ಆಚರಿಸುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

