ಬೆಂಗಳೂರು ಗ್ರಾಮಾಂತರ

ಕನ್ನಮಂಗಲ ಮಾರುತಿ ವಿದ್ಯಾ ಮಂದಿರ ಶೇ. 100 ಫಲಿತಾಂಶ

Published On :

ದೇವನಹಳ್ಳಿ:  ದೇವನಹಳ್ಳಿ ತಾಲೂಕು ಕನ್ನಮಂಗಲ ಗ್ರಾಮದ ಶ್ರೀ ಮಾರುತಿ ವಿದ್ಯಾಮಂದಿರ 2012-13 ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ನೂರರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿಯ ಕೆ.ಶ್ರೀನಿವಾಸ್ ಅವರು ತಿಳಿಸಿ ಕಳೆದ 10 ವರ್ಷಗಳಿಂದಲೂ ಸತತವಾಗಿ ಶೇ.ನೂರರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ. ಕನ್ನಮಂಗಲ ಶಾಲೆಯಲ್ಲಿ 44 ಮಂದಿ ವಿದ್ಯಾರ್ಥಿಗಳಲ್ಲಿ 16 ಅತ್ಯುನ್ನತ ಶ್ರೇಣಿ, 27 ಪ್ರಥಮ ದರ್ಜೆ ಹಾಗೂ ಒಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ, ಮೈತ್ರಿ ಹೆಗಡೆ ಶೇ.93.76, ದಿವ್ಯ ಶೇ.93.44, ಬಿ.ಜಿ.ಹರ್ಷಿತ ಶೇ.92.64, ಮುಹಾರಕ್ ಶೇ. 91.04 ಹಾಗೂ ಸುಹಾಸ್ ಶೇ.90.24 ರಷ್ಟು ಅಂಕಗಳನ್ನು ಗಳಿಸಿದ್ದಾರೆ. ಇದೇ ಸಂಸ್ಥೆಯ ಆಲೂರು ದುದ್ದನಹಳ್ಲಿ ಶಾಲೆಯಲ್ಲಿ ಸಹ ಶೇ.100ರಷ್ಟು ಫಲಿತಾಂಶ ಲಭಿಸಿದ್ದು ಎಲ್ಲ 26 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.