ಮತದಾರರಿಗೆ ತೇಜಸ್ವಿನಿ ಅಭಿನಂದನೆ
ಕ.ಪ್ರ.ವಾರ್ತೆ ಆನೇಕಲ್ಲ್ಣು ಮೇ 9
ಸತತ 20 ವರ್ಷಗಳಿಂದ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇಷ್ಟೊಂದು ಹೆಚ್ಚಿನ ಮತ ಗಳಿಸಿರಲಿಲ್ಲ. ಉತ್ತರಹಳ್ಳಿ ಕ್ಷೇತ್ರದಿಂದ ಬೇರ್ಪಟ್ಟ ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ಗೆ 63849 ಮತಗಳನ್ನು ನೀಡಿ ಆಶೀರ್ವಾದ ಮಾಡಿದ್ದಾರೆ. ಅದಕ್ಕಾಗಿ ಕೃತಜ್ಞತೆ ಎಂದು ಪರಾಜಿತ ಅಭ್ಯರ್ಥಿ ತೇಜಸ್ವಿನಿ ಗೌಡ ತಿಳಿಸಿದ್ದಾರೆ. ಅವರು ಚುನಾವಣಾ ಫಲಿತಾಂಶ ನಂತರ ಮಾತನಾಡಿ ಚುನಾವಣಾ ಪೂರ್ವ ಪ್ರಮಾಣಪತ್ರದಲ್ಲಿ ನನ್ನ ಸ್ಪರ್ಧಿಗಳು ಘೋಷಿಸಿಕೊಂಡ ಆದಾಯ ಮೊತ್ತವೇ ಕೋಟಿಗಳು. ನಾನು ಪತ್ರಕರ್ತೆಯಾಗಿ ರಾಜಕಾರಣಕ್ಕೆ ಬಂದವಳು. ಗಾಡ ಫಾದರ್ಗಳು ಇಲ್ಲ. ನಿಷ್ಠಾವಂತ ಹಾಗೂ ಪ್ರಾಮಾಣಿಕ ಯುವ ಪಡೆ ನನಗೆ ಮತ ನೀಡಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ. ಮುಂದಿನ ದಿನದಲ್ಲಿ ಇದೇ ಕ್ಷೇತ್ರದಲ್ಲಿ ಸ್ಪರ್ರ್ಧಿಸಿ ಗೆದ್ದು ಬರುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಜಕಾರಣದಿಂದ ಹಿಂದೆ ಸರಿಯಲ್ಲ. ಕ್ಷೇತ್ರದ ಉದ್ಗಗಲಕ್ಕೂ ಸಂಚರಿಸುತ್ತೇನೆ.
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬೆಂಗಳೂರು ನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹೊಸ ಹೊಸ ಯೋಜನೆಗಳ ಜೊತೆಗೆ ಸ್ವಾವಲಂಬಿ ಬದುಕಿಗೆ ಬೇಕಾದ ಯೋಜನೆ ರೂಪಿಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

