ಬೆಂಗಳೂರು ಗ್ರಾಮಾಂತರ

ನನ್ನ ಸೋಲಿಗೆ ನಾನೇ ಹೊಣೆ: ಎ. ಮಂಜು

Published On :

ಕ.ಪ್ರ. ವಾರ್ತೆ  ಮಾಗಡಿ  ಮೇ 10
ಮಾಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಾದ ಸೋಲಿಗೆ ನಾನೇ ಹೊಣೆಯನ್ನು ಹೊರುವುದಾಗಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎ.ಮಂಜು ಹೇಳಿದರು.
ಅವರು ಮಾಗಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ರಾಜಕಾರಣದಲ್ಲಿ ಸೋಲು, ಗೆಲವು ಸಹಜ, ಸೋಲನ್ನು ಗೆಲವಾಗಿ ಸ್ವೀಕರಿಸುತ್ತೇನೆ. ಈ ಚುನಾವಣೆ ನನಗೆ ಅನುಭವದ ಪಾಠ ಕಲಿಸಿದೆ. ಇದಕ್ಕೆ ಕಾರಣ ಹುಡುಕಿಕೊಂಡು ಕೂರುವುದಿಲ್ಲ, ಯಾರನ್ನು ದೂಷಿಸುವುದು ಇಲ್ಲ, ಸೋಲಿಗೆ ನಾನೇ ಹೊಣೆಗಾರನಾಗುತ್ತೇನೆ. ಮುಂದಿನ ದಿನಗಳಲ್ಲಿ  ಕ್ಷೇತ್ರದ ಅಭಿವೃದ್ಧಿ ಮತ್ತು ಕಾರ್ಯಕರ್ತರ ರಕ್ಷಣೆ ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ. ಈ ನಿಟ್ಟಿನಲ್ಲಿ ಪಕ್ಷವನ್ನು ಸದೃಢಗೊಳಿಸಲು ಬೂತ್ ಮಟ್ಟದಲ್ಲಿ ಸಂಘಟನೆಗೆ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು. ನನ್ನನ್ನು ಮನೆಯ ಮಗನೆಂದು ಕ್ಷೇತ್ರದ ಮತದಾರರು 60,462 ಮತಗಳನ್ನು ನೀಡುವ ಮೂಲಕ ಆಶೀರ್ವದಿಸಿದ್ದಾರೆ. ಕ್ಷೇತ್ರದ ಮತದಾರರಿಗೆ ಕೃತಜ್ಞತರಾಗಿರುವುದಾಗಿ ತಿಳಿಸಿದರು. ನನ್ನ ಸೋಲಿನಿಂದಾಗಿ ಕಾರ್ಯಕರ್ತರು ದೃತಿಗೆಡಬಾರದು, ಪಕ್ಷವನ್ನು ಮುನ್ನಡೆಸಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.