ಅಪಘಾತ: ಹೆಬ್ಬಾಳ ಶಾಸಕ ಪಾರು
ಕ.ಪ್ರ. ವಾರ್ತೆ ರಾಮನಗರ ಮೇ 11
ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ನೂತನ ಶಾಸಕ ಜಗದೀಶ ಕುಮಾರ್ ಜಿಲ್ಲೆಯ ಕಲ್ಮಿಣಿಕೆ ಬಳಿ ಶನಿವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಗದೀಶ ಕುಮಾರ್ ಸಹಿತ ನಾಲ್ವರು ಶವರ್ಲೆ ಕಾರ್ನಲ್ಲಿ ಮೈಸೂರಿನ ಕಡೆಗೆ ಪ್ರಯಾಣಿಸುತ್ತಿದ್ದರು. ಆ ವೇಳೆ ಬೆಂಗಳೂರು ಕಡೆಗೆ ಅತಿ ವೇಗದಿಂದ ಬರುತ್ತಿದ್ದ ಸ್ಯಾಂಟ್ರೋ ಕಾರು ಸರಣಿ ಅಪಘಾತ ಮಾಡಿಕೊಂಡು ವಿಭಜಕದಿಂದ ಆಚೆಗೆ ಹಾರಿ ಶಾಸಕರಿದ್ದ ಕಾರಿಗೆ ಡಿಕ್ಕಿಯಾಗಿದೆ.
ಅಪಘಾತಕ್ಕೆ ಕಾರಣವಾಗಿರುವ ಸ್ಯಾಂಟ್ರೋ ಕಾರಿನ ಚಾಲಕ ಲಾರಿಯೊಂದನ್ನು ಹಿಂದಿಕ್ಕಲು ಅತಿವೇಗದಿಂದ ಚಲಿಸುತ್ತಿದ್ದ. ಲಾರಿಗೆ ಅಪ್ಪಳಿಸಿದ ಸ್ಯಾಂಟ್ರೋ ಕಾರು ರಸ್ತೆ ವಿಭಜಕ ದಾಟಿ ಪಕ್ಕದ ಪಥಕ್ಕೆ ಹಾರಿತು. ಅಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದ ಫೋರ್ಡ್ ಕಾರಿಗೆ ನಂತರ ಶಾಸಕರು ಪ್ರಯಾಣಿಸುತ್ತಿದ್ದ ಕಾರಿಗೂ ಡಿಕ್ಕಿಯಾಯಿತು. ಉಭಯ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಗದೀಶ ಕುಮಾರ್ ಮತ್ತು ಜತೆಗಿದ್ದವರರಿಗೆ ಯಾವುದೇ ಗಾಯಗಳೂ ಆಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಕುಂಬಳಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಯಾಂಟ್ರೋ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

