ಧರ್ಮ, ಸಂಸ್ಕೃತಿ ನಿರ್ಲಕ್ಷ್ಯದಿಂದ ಅಸಮಾಧಾನ
ಕ.ಪ್ರ. ವಾರ್ತೆ ನೆಲಮಂಗಲ ಮೇ 12
ಸಮುದಾಯದ ಎಲ್ಲಾ ರಂಗಗಳಲ್ಲೂ ಮಾನವೀಯ ಮೌಲ್ಯಗಳು ಕುಸಿತಗೊಂಡು ಧರ್ಮ ಮತ್ತು ಸಂಸ್ಕೃತಿ ಬಗ್ಗೆ ನಿರ್ಲಕ್ಷ್ಯ ಮನೋಭಾವ ತಾಳುತ್ತಿದ್ದೇವೆ ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
ಅವರು ಭಾನುವಾರ ಪಟ್ಟಣದ ಅರಳೇಪೇಟೆ ಬಸವಣ್ಣ ದೇವಸ್ಥಾನದಲ್ಲಿ ಬಸವೇಶ್ವರ ಸ್ವಾಮಿಗೆ ಬೆಳ್ಳಿ ವಜ್ರಾಂಗಿ ಧಾರಣೆ ಕಾರ್ಯಕ್ರಮ ನೆರವೇರಿಸಿ ಧರ್ಮಜಾಗೃತಿ ಸಮಾವೇಶದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ ಮನುಷ್ಯನ ಭೌತಿಕ ಬದುಕು ಬಲಗೊಳ್ಳುತ್ತಿದ್ದರೂ ಆಂತರಿಕ ಬದುಕು ಅಶಾಂತಿಯಿಂದ ತತ್ತರಿಸುತ್ತಿದೆ. ಧರ್ಮ ಪ್ರಜ್ಞೆ ಮತ್ತು ಧರ್ಮ ಪಾಲನೆ ಇಲ್ಲದಿರುವುದರಿಂದ ಅತೃಪ್ತಿ, ಅಸಮಾಧಾನ ತಾಂಡವವಾಡುತ್ತಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಡಿಯೂರು ಕ್ಷೇತ್ರದ ಶ್ರೀ ರೇಣುಕಶಿವಾಚಾರ್ಯಸ್ವಾಮಿಗಳು ಮಾತನಾಡುತ್ತಾ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಅಸ್ತಿತ್ವವನ್ನು ಕಾಪಾಡುವುದೆ ಧರ್ಮದ ಮೂಲ ಗುರಿಯಾಗಿದೆ ಎಂದರು.
ಶಿವಗಂಗೆಯ ಮೇಲಗಣವಿ ಮಠದ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯಸ್ವಾಮೀಜಿ, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯಸ್ವಾಮೀಜಿ ಹಾಗೂ ಶ್ರೀ ಬಸವೇಶ್ವರ ಯುವಕ ಸಮಿತಿ ಪಧಾದಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

