ಬೆಂಗಳೂರು ಗ್ರಾಮಾಂತರ

ಸಾರಿಗೆ ಬಸ್ ಡಿಕ್ಕಿ; ಕಾರ್ಮಿಕ ಸಾವು

Published On :

ರಾಮನಗರ: ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬನಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಮತ್ತೀಕೆರೆ ಗ್ರಾಮದ ಬಳಿ ಭಾನುವಾರ ಸಂಜೆ ಸಂಭವಿಸಿದೆ.  ಹೊಸೂರುದೊಡ್ಡಿ ಗ್ರಾಮದ ಕಟ್ಟಡ ಕಾರ್ಮಿಕ ಶಿವಣ್ಣ(45) ಮೃತ ವ್ಯಕ್ತಿ. ಆತ ಚನ್ನಪಟ್ಟಣ ಕಡೆ ತೆರಳಲು ಸಂಜೆ 7 ಗಂಟೆಯಲ್ಲಿ ಆಟೋಗಾಗಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಚಾಲಕನು ಬಸ್ ನಿಲ್ಲಿಸದೆ ಹೋಗಿದ್ದಾನೆ. ಸದರಿ ಬಸ್ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಮನಗರ ವಿಭಾಗಕ್ಕೆ ಸೇರಿದ್ದೆನ್ನಲಾಗಿದೆ. ಬಸ್ ಸಂಖ್ಯೆ ಗಮನಿಸಿರುವ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.