ಬೆಂಗಳೂರು ಗ್ರಾಮಾಂತರ

ರಾಜಕೀಯಕ್ಕೆ ಬೋರ್‌ವೆಲ್, ಪಂಪ್ ನಾಶ

Published On :

ಕನ್ನಡಪ್ರಭ ವಾರ್ತೆ   ಕನಕಪುರ   ಮೇ 12
ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಎರಡು ಬೋರ್‌ವೆಲ್ ಹಾಗೂ ಪಂಪ್‌ಗಳನ್ನು ದುಷ್ಕರ್ಮಿಗಳು ನಾಶಪಡಿಸಿರುವ ಘಟನೆ ತಾಲೂಕು ತಟ್ಟೇಕೆರೆ ಸಮೀಪದ ಲೋಕನಾಯ್ಕನ ತಾಂಡಾದಲ್ಲಿ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಚುನಾವಣಾ ಫಲಿತಾಂಶ ಘೋಷಣೆಯಾದ ರಾತ್ರಿಯಂದು ಒಂದು ಪಕ್ಷಕ್ಕೆ ಸೇರಿದ ಗುಂಪು ಕುಡಿತದ ಅಮಲಿನಲ್ಲಿ ದಾಂಧಲೆ ನಡೆಸಿ ಬೋರ್‌ವೆಲ್‌ಹಾಗೂ ಪಂಪುಗಳನ್ನು ನಾಶಪಡಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಜೆಡಿಎಸ್ ಪ್ರಾಬಲ್ಯದ ಗ್ರಾಮದಲ್ಲಿ, ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಮತಗಳಿಸಿರುವುದು ಈ ಕಿಡಿಗೇಡಿತನದ ಕೃತ್ಯಕ್ಕೆ ಕಾರಣ ಎಂದು ತಾಂಡಾ ನಿವಾಸಿಗಳು ಆರೋಪಿಸಿದ್ದಾರೆ.
ಪದೇಪದೇ ನಡೆಯುತ್ತಿರುವ ಈ ಕಿಡಿಗೇಡಿಗಳ ಕೃತ್ಯದ ವಿರುದ್ಧ  ತಾಲೂಕು ಆಡಳಿತ ಹಾಗೂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ತಾಂಡಾ ನಿವಾಸಿಗಳು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.