ಬೆಂಗಳೂರು ಗ್ರಾಮಾಂತರ

ಬೊಮ್ಮನಹಳ್ಳಿಯಲ್ಲಿ ಸಂಭ್ರಮ

Published On :

ಹೆಬ್ಬಗೋಡಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಹೆಬ್ಬಗೋಡಿ  ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಕುಪೇಂದ್ರ ರೆಡ್ಡಿ, ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿ ತನ್ನ ಅಧಿಕಾರವಧಿಯಲ್ಲಿ ಜನರ ದುಡ್ಡನ್ನು ಕೊಳ್ಳೆಹೊಡೆಯುವುದನ್ನು ಬಿಟ್ಟು ಮತ್ತೇನನ್ನು ಮಾಡಿಲ್ಲ ಎಂದು ಕಿಡಿಕಾರಿದರು.  ಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ರೆಡ್ಡಿ,   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಾಸುದೇವ್‌ರೆಡ್ಡಿ ಮಾತನಾಡಿದರು. ಮುಖಂಡರಾದ ಶಾಮಣ್ಣ ರೆಡ್ಡಿ, ಕೆ. ವಾಸುದೇವ್, ಯುವ ಕಾಂಗ್ರೆಸ್ ಮುಖಂಡ ಯೋಗೇಶ್‌ಗೌಡ ಮತ್ತಿತರರು ಭಾಗವಹಿಸಿದ್ದರು.

ಸಿಎಂ ಕ್ರಮಕ್ಕೆ ಸ್ವಾಗತ
ರಾಮನಗರ: ಪ್ರತಿ ಲೀಟರ್ ಹಾಲಿಗೆ ಸರ್ಕಾರದ ಪ್ರೋತ್ಸಾಹ ಧನವನ್ನು 4ಕ್ಕೆ ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಕೆಎಂಎಫ್ ನಿರ್ದೇಶಕ ಪಿ.ನಾಗರಾಜು ಸ್ವಾಗತಿಸಿದ್ದಾರೆ.  ಹಾಲಿನ ಪ್ರೋತ್ಸಾಹ ಧನ ಹೆಚ್ಚಳದಿಂದ ಸರ್ಕಾರಕ್ಕೆ ವಾರ್ಷಿಕ 492 ಕೋಟಿ ಹೆಚ್ಚುವರಿ ಹೊರೆಯಾಗಲಿದೆ. ಆದಾಗ್ಯೂ ಸಿದ್ದರಾಮಯ್ಯ ಅವರು ರೈತ ಪರವಾದ ಕಾಳಜಿಯಿಂದ ದಿಟ್ಟ ನಿರ್ಧಾರ ಘೋಷಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.