ಹೊನ್ನೇನಹಳ್ಳಿಯಲ್ಲಿ ಗೋವು ಪೂಜೆ
ನೆಲಮಂಗಲ: ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಗ್ರಾಮದ ಯುವಕರು ಮತ್ತು ಹಿರಿಯರು ವಿಸೇಷವಾಗಿ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. ಮಧ್ಯಾಹ್ನ ಗೋವುಗಳನ್ನು ಅಲಂಕರಿಸಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮೂಲಕ ದೇವಾಲಯದ ಮುಂದೆ ಪೂಜಿಸಿದರು. ಜಸವಜಯಂತಿ ಅಂಗವಾಗಿ ಪಾಲಕ, ನೀರು ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ನಂತರ ಆರತಿ ಪೂಜೆಯೊಂದಿಗೆ ಬಸವೇಶ್ವರ ಸ್ವಾಮಿಯ ಮೆರವಣಿಗೆ ಗ್ರಾಮದಲ್ಲಿ ನಡೆಸಿದರು. ಹಿಂದಿನಿಂದಲೂ ಈ ರೀತಿ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಗ್ರಾಮದ ಹಿರಿಯರಾದ ಪರಮಶಿವಯ್ಯ ತಿಳಿಸಿದರು.
ನೇತ್ರ ತಪಾಸಣೆ
ಹೊಸಕೋಟೆ: ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಬೆಂಗಳೂರು ಅಲಸೂರಿನ ರಾಮಕೃಷ್ಣ ಮಠ, ಗ್ಲೋಬ್ ಐ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮುಗಬಾಳದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇ 14ರಂದು ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ. ಅಗತ್ಯವಿರುವವರಿಗೆ ಹೊಸಕೋಟೆಯ ಜಿಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ತಜ್ಞವೃದ್ಯರಿಂದ ಉಚಿತವಾಗಿ ಅಂತರಚಕ್ಷು ಮಸೂರವನ್ನು ಅಳವಡಿಸಿ ಹೊಲಿಗೆರಹಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

