ಬೆಂಗಳೂರು ಗ್ರಾಮಾಂತರ

ಮರಕ್ಕೆ ಲಾರಿ ಡಿಕ್ಕಿ; ವ್ಯಕ್ತಿ ಸಾವು

Published On :

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ಮಹಿಮಾಪುರ ಗೇಟ್ ಹತ್ತಿರ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿರುವ ಘಟನೆ ಮಂಗಳವಾರ  ನಡೆದಿದೆ. ಮೃತ ಕ್ಲೀನರ್‌ನನ್ನು ಅಭಿಷೇಕ್‌ಗೌಡ(22) ಎಂದು ಗುರುತಿಸಲಾಗಿದೆ. ಚಾಲಕ ನಾಗರಾಜ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಲಾರಿ ಬೆಂಗಳೂರಿನಿಂದ ತುಮಕೂರಿನ ಕಡೆ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ವಿಷ ಜೋಳ ತಿಂದು 4 ಹಸು ಸಾವು
ನೆಲಮಂಗಲ: ವಿಷ ಸಿಂಪಡಿಸಿದ ಜೋಳ ಮೇಯ್ದ ನಾಲ್ಕು ಹಸುಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟನಕುರ್ಚಿಯಲ್ಲಿ ನಡೆದಿದೆ. ಬೈರೇಗೌಡನಹಳ್ಳಿ ಲಿಂಗಮೂರ್ತಿಗೆ ಸೇರಿದ ಜಮೀನಿನಲ್ಲಿ ಜೋಳಕ್ಕೆ ಔಷಧಿ ಸಿಂಪಡಿಸಿದ್ದರು. ಮಂಟನಕುರ್ಚಿ ಗೋವಿಂದರಾಜುಗೆ ಸೇರಿದ ನಾಲ್ಕು ಹಸುಗಳು ಔಷಧಿ ಸಿಂಪಡಿಸಿದ್ದ ಜೋಳ ಮೇಯ್ದ ಪರಿಣಾಮ ಅಸ್ವಸ್ಥಗೊಂಡು ಸಾವನ್ನಪ್ಪಿವೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ವಿಷದ ಜೋಳದಿಂದ ಸಾವನ್ನಪ್ಪಿದ್ದಾವೋ ಇಲ್ಲವೊ ಎಂದು ಪಶು ವೈದ್ಯಾಧಿಕಾರಿಗಳಿಂದ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಲಾರಿ ಉರುಳಿ ವ್ಯಕ್ತಿ ಸಾವು, 7 ಗಾಯ
ರಾಮನಗರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಒಬ್ಬ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವನನ್ನು ಅಸ್ಸಾಂ ಮೂಲಕ ಜಿಯಾದ್ ಉಲ್ಲಾ ಇಸ್ಲಾಂ(22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕೂಟಗಲ್ ಬಳಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಲಾರಿಯಲ್ಲಿದ್ದ ಇಸ್ಲಾಂ ಮೃತಪಟ್ಟರೆ ಚಾಲಕನೂ ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡರು.  ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಯಿತು. ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

ಬೈಕ್‌ಗೆ ಬಿಎಂಟಿಸಿ ಡಿಕ್ಕಿ; ಸವಾರ ಸಾವು
ರಾಮನಗರ: ಚಲಿಸುತ್ತಿದ್ದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.  ಕುಂಬಳಗೋಡು ನಿವಾಸಿ ನಾಗರಾಜ(17) ಮೃತಪಟ್ಟ ದುರ್ದೈವಿ. ಕುಂಬಳಗೋಡಿನ ಕಣಮಿಣಿಕೆ ಕಾಲೋನಿ ಬಳಿ ಬೈಕ್‌ನಲ್ಲಿ ಚಲಿಸುತ್ತಿದ್ದ ನಾಗರಾಜುಗೆ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿಯೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡು, ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.