ಬೆಂಗಳೂರು ಗ್ರಾಮಾಂತರ

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧಿಕಾರ ಸ್ವೀಕಾರ

Published On :

ಕ.ಪ್ರ. ವಾರ್ತೆ ,  ರಾಮನಗರ ,  ಮೇ 14
ಚುನಾವಣಾ ಆಯೋಗದ ಆದೇಶದ ಮೇಲೆ ವರ್ಗಗೊಂಡಿದ್ದ ಜಿಲ್ಲಾಧಿಕಾರಿ ಶ್ರೀರಾಮರೆಡ್ಡಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಅವರೀಗ ಕರ್ತವ್ಯಕ್ಕೆ ಮರಳಿದ್ದು, ಪುನಃ ಅಧಿಕಾರ ವಹಿಸಿಕೊಂಡಿದ್ದಾರೆ.
ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆಗೊಂಡು, ಸೀಮಿತ 47 ದಿನದ ಮಟ್ಟಿಗೆ ಜಿಲ್ಲಾಧಿಕಾರಿ ಹುದ್ದೆ ನಿಭಾಯಿಸಿದ ನವೀನ್ ರಾಜ್ ಸಿಂಗ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಅನುಭವಿಸಿದ ಇದಾ ಮಾರ್ಟಿನ್ ಮಾರ್ಬ್ಯಾನಿಂಗ್ ಅವರಿಗೆ ಬೀಳ್ಕೊಡಲಾಗಿದೆ.
ಅನುಪಮ್ ಅಗ್ರವಾಲ್ ಮೊನ್ನೆಯೇ ಸೇವೆಗೆ ಮರಳಿದರೆ, ನವೀನ್ ರಾಜ್ ಸಿಂಗ್ ಅವರಿಗೆ ಮಂಗಳವಾರ ಬೆಳಗ್ಗೆಯಷ್ಟೇ ಬೀಳ್ಕೊಡಲಾಯಿತು. ಶ್ರೀರಾಮರೆಡ್ಡಿ ಮಧ್ಯಾಹ್ನದ ವೇಳೆ ಅಧಿಕಾರ ವಹಿಸಿಕೊಂಡು, ಕುರ್ಚಿ ಅಲಂಕರಿಸಿದರು.
ಶ್ರೀರಾಮರೆಡ್ಡಿ ಪುನಃ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಉಪ ವಿಭಾಗಾಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್, ತಹಸೀಲ್ದಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.  
ಸಿಬ್ಬಂದಿಗೆ ಸಹಕಾರ: 47 ದಿನಗಳ ಪುಟ್ಟ ಅವಧಿಯಲ್ಲಿ ಸಮರ್ಥವಾಗಿ ಚುನಾವಣೆಯನ್ನು ನಿಭಾಯಿಸಲು ಸಹಕರಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ಗಮನ ಜಿಲ್ಲಾಧಿಕಾರಿ ನವೀನ್ ರಾಜ್ ಸಿಂಗ್ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಧನ್ಯವಾದ ಅರ್ಪಿಸಿದರು.
ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೆಲಸ ನಿರ್ವಹಿಸಲಾಗಿದೆ. ಈ ಜಿಲ್ಲೆಯ ಎಲ್ಲ 4 ಕ್ಷೇತ್ರಗಳಲ್ಲೂ ಹಣಾಹಣಿ ಇದ್ದುದರಿಂದ ತುಂಬಾ ಎಚ್ಚರ ವಹಿಸಬೇಕಾಯಿತು. ಈ ಕೆಲಸವನ್ನು ಎಲ್ಲ ಅಧಿಕಾರಿಗಳ ಸಹಕಾರವಿಲ್ಲದೆ ಈ ಕೆಲಸವನ್ನು ಯಶಸ್ವಿಯಾಗಿ ಮಾಡಲಾಗುತ್ತಿರಲಿಲ್ಲ ಎಂದರು. ಅಪರ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಉಪ ವಿಭಾಗಾಧಿಕಾರಿ ಡಾ. ಎಂ.ಎನ್.ರಾಜೇಂದ್ರಪ್ರಸಾದ್ ಮತ್ತಿತರರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.