ಬೆಂಗಳೂರು ಗ್ರಾಮಾಂತರ

'ಪ್ರತಿಭೆಗೆ ಎಲ್ಲೆಡೆ ಮನ್ನಣೆ'

Published On :

ದೊಡ್ಡಬಳ್ಳಾಪುರ: ಪ್ರತಿಭೆಗೆ ಎಲ್ಲೆಡೆ ಮನ್ನಣೆ ಸಿಗುತ್ತದೆ. ದೊಡ್ಡಬಳ್ಳಾಪುರದಲ್ಲಿ ಹಲವು ವರ್ಷಗಳ ಬಳಿಕ ಪಿಯುಸಿ ಪರೀಕ್ಷೆಯಲ್ಲಿ ಗಣನೀಯ ಸಾಧನೆ ಕಂಡು ಬಂದಿದ್ದು, ರಾಜ್ಯಮಟ್ಟದಲ್ಲಿ 11ನೇ ಸ್ಥಾನ ಗಳಿಸಿರುವ ವಿದ್ಯಾರ್ಥಿ ಆದಿನಾರಾಯಣಪ್ರಸಾದ್ ಸಾಧನೆ ಶ್ಲಾಘನೀಯ ಎಂದು ದೇವರಾಜ ಅರಸ್ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಜಿ.ಎಚ್.ನಾಗರಾಜ ಹೇಳಿದರು.
ಇಲ್ಲಿನ ಶ್ರೀದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಡಿ.ಎಸ್.ಆದಿನಾರಾಯಣಪ್ರಸಾದ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 580 ಅಂಕಗಳನ್ನು ಗಳಿಸುವುದರೊಂದಿಗೆ ರಾಜ್ಯ ಮಟ್ಟದಲ್ಲಿ 11ನೇ ಮತ್ತು ಬೆಂ.ಗ್ರಾ.ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಸ್ಥೆಯ ಸಿಇಓ ಎಸ್.ಎಲ್.ಗಂಗಾಧರಪ್ಪ ಮಾತನಾಡಿದರು.
ನಿರ್ದೇಶಕ ಜೆ.ರಾಜೇಂದ್ರ ಮಾತನಾಡಿ, ಆದಿನಾರಾಯಣ ಪ್ರಸಾದ್ ಸಾಧನೆ ಎಲ್ಲರಿಗೂ ಮಾದರಿ. ಈ ವಿದ್ಯಾರ್ಥಿ ಬಯಸಿದರೆ ಆರ್.ಎಲ್.ಜಾಲಪ್ಪ ತಾಂತ್ರಿಕ ಕಾಲೇಜಿನಲ್ಲಿ ಉಚಿತ ಇಂಜಿನಿಯರಿಂಗ್ ಸೀಟು ನೀಡಿ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದರು. ಜೊತೆಗೆ ಆತನ ಮುಂದಿನ ವಿದ್ಯಾಭ್ಯಾಸಕ್ಕೆ ಕೂಡ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಕೆ.ಲವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಆದಿನಾರಾಯಣಪ್ರಸಾದ್‌ಗೆ 10 ಸಾವಿರ ನಗದು ಬಹುಮಾನ, ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.