ಬೆಂಗಳೂರು ಗ್ರಾಮಾಂತರ

ಮೊರಾರ್ಜಿ ಪಪೂ ಕಾಲೇಜಿಗೆ ಆಹ್ವಾನ

Published On :

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜಿಗೆ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ಪಿಸಿಎಂಬಿ ಮತ್ತು ಪಿಸಿಎಂಸಿ ಕೋರ್ಸ್‌ಗಳಲ್ಲಿ ವಿದ್ಯಾಬ್ಯಾಸ ಮಾಡಲು ಇಚ್ಚೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರು.2 ಲಕ್ಷ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರು. 44,500 ಮಿತಿ ಇರುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪಿಎಲ್‌ಡಿ ಬ್ಯಾಂಕ್ ಹತ್ತಿರ ಐಜೂರು, ರಾಮನಗರ  ಇಲ್ಲಿ ಪಡೆಯಬಹುದು.

ವೃದ್ಧ ನಾಪತ್ತೆ
ನೆಲಮಂಗಲ: ಮನೆಯಿಂದ ಹೊರಗೆ ಹೋದ ವೃದ್ಧರೊಬ್ಬರು ಕಾಣೆಯಾಗಿರುವ ಘಟನೆ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಣೆಯಾದವರನ್ನು ತಾಲೂಕಿನ ಸೋಮಸಾಗರ ಗ್ರಾಮದ ಹುಚ್ಚಯ್ಯ(75) ಎಂದು ಗುರುತಿಸಲಾಗಿದೆ. ಈತ ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 5.5 ಅಡಿ ಎತ್ತರವಿದ್ದು, ಮಾಹಿತಿ ದೊರೆತಲ್ಲಿ ತ್ಯಾಮಗೊಂಡ್ಲು ಠಾಣೆ-27732033, ವೃತ್ತನಿರೀಕ್ಷಕರ ಕಚೇರಿ 080-27726260.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.