ಬೆಂಗಳೂರು ಗ್ರಾಮಾಂತರ

ನೆಲ್ಲಿಗುಡ್ಡೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Published On :

ಕ.ಪ್ರ.ವಾರ್ತೆ ರಾಮನಗರ ಮೇ 19
ಬಿಡದಿ ಬಳಿಯಿರುವ ನೆಲ್ಲಿಗುಡ್ಡೆ ಕೆರೆಯನ್ನು ಕೋಕಾ ಕೋಲಾ ಕಂಪೆನಿಯ ಸಹಭಾಗಿತ್ವದಲ್ಲಿ ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಡದಿಯಿಂದ ನಾಲ್ಕು ಕಿ.ಮೀ. ದೂರವಿರುವ ಈ ಕೆರೆಯನ್ನು ಪರಿಸರ ಸ್ನೇಹಿ ಕೆರೆಯನ್ನಾಗಿಸಲು ರು.5 ಕೋಟಿ ವೆಚ್ಚದಲ್ಲಿ ನೀಲನಕ್ಷೆ ತಯಾರಿಸಲಾಗಿದೆ. ಕೋಕಾ ಕೋಲಾ ಕಂಪನಿ ರು.1.35 ಕೋಟಿ ನೀಡಲಿದೆ ಎಂದರು.
ಪ್ರಥಮವಾಗಿ ಕೆರೆಯಲ್ಲಿ ತುಂಬಿರುವ ಹೂಳು ತೆಗೆಯುವ ಕಾಮಗಾರಿ ಆರಂಭವಾಗಲಿದೆ. ನಂತರ ಹಂತ ಹಂತವಾಗಿ ಕೆರೆಯ ಅಭಿವೃದ್ಧಿಪಡಿಸಲಾಗುತ್ತದೆ. ವಾಯು ವಿಹಾರಿಗಳಿಗೆ ಸಹಕಾರಿಯಾಗುವ ವಾಕ್ ಪಾಥ್
ಮತ್ತು ಉದ್ಯಾನವನ ನಿರ್ಮಾಣ ಯೋಜನೆಯ ಭಾಗವಾಗಿದೆ ಎಂದು ತಿಳಿಸಿದರು.
ಒತ್ತುವರಿ ಆಗಿದ್ದರೆ ತೆರವು: ಕೆರೆಯ ಜಾಗವನ್ನು ಸರ್ವೆ ಮಾಡಲಾಗುವುದು. ಒತ್ತುವರಿ ಆಗಿದ್ದರೆ ತೆರವುಗೊಳಿಸಲಾಗುವುದು. ಮಾಗಡಿಯ ಗೌರಮ್ಮನ ಕೆರೆ ಅಭಿವೃದ್ಧಿಪಡಿಸಿರುವಂತೆಯೇ ಈ ಕೆರೆಯನ್ನೂ ಸಹ ಅಭಿವೃದ್ಧಿ ಪಡಿಸಲಾಗುವುದು. ಕೆರೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದರು.
ಸಂಪರ್ಕ ರಸ್ತೆಗೆ ಭೂಮಿ ಪೂಜೆ: ನೆಲ್ಲಿಗುಡ್ಡೆ ಕೆರೆ ಕಾಮಗಾರಿ ಚಾಲನೆಗೆ ಮುನ್ನ ಬಾನಂದೂರು-ಬೈರವನದೊಡ್ಡಿಗೆ ಸಂಪರ್ಕ ಕಲ್ಪಿಸುವ ನೆಲ್ಲಿಗುಡ್ಡೆ ಹಳ್ಳದ ಸೇತುವೆಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಸಿ.
ಬಾಲಕೃಷ್ಣ ಭೂಮಿ ಪೂಜೆ ನೆರೆವೇರಿಸಿದರು.
ಈಗಾಗಲೆ ಸೇತುವೆ ನಿರ್ಮಾಣವಾಗಿದ್ದು, ಸಂಪರ್ಕ ರಸ್ತೆ ಕಾಮಗಾರಿಗೆ ಕೆಆರ್‌ಡಿಸಿಎಲ್ ರು.21.87 ಲಕ್ಷ ಅನುದಾನ ನೀಡಿದೆ. ಈ ಕಾಮಗಾರಿಯನ್ನು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ನಿರ್ವಹಿಸಲಿದೆ. ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ, ಜಿ.ಪಂ. ಮಾಜಿ ಸದಸ್ಯ ಸಿ.ಎಚ್.ಪುಟ್ಟಯ್ಯ, ಗ್ರಾ.ಪಂ. ಅಧ್ಯಕ್ಷೆ ಸರೋಜಮ್ಮ, ಕೋಕಾ ಕೋಲಾ ಕಂಪನಿಯ ಅಧಿಕಾರಿ ವಿನೋದ್ ಜಕಾಸಿ, ರಮೇಶ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.