538 ಕಿಶೋರಿಯರಿಗೆ ವೃತ್ತಿ ಕೌಶಲ್ಯ ತರಬೇತಿ: ಖುರೇಷಿ
ಕ.ಪ್ರ.ವಾರ್ತೆ ಸೂಲಿಬೆಲೆ ಮೇ 19
ಹೊಸಕೋಟೆ ತಾಲೂಕಿನ ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಬಲ ಯೋಜನೆಯಡಿಯಲ್ಲಿ 538 ಕಿಶೋರಿಯರಿಗೆ ವೃತ್ತಿ ನಿರತ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ ಎಂದು ಹೊಸಕೋಟೆ ತಾಲೂಕಿನ ಸಿಡಿಪಿಒ ಸಾಧಿಕ್ ಖುರೇಷಿ ಹೇಳಿದ್ದಾರೆ.
ಸೂಲಿಬೆಲೆ ಗ್ರಾಪಂ ಆವರಣದಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆವತಿಯಿಂದ ಕಳೆದ 15 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೊಸಕೋಟೆ ತಾಲೂಕಿನ ನಾನಾ ಕಡೆ ಆಯ್ದ ಕಿಶೋರಿಯರಿಗೆ ಸಬಲ ಯೋಜನೆಯಡಿಯಲ್ಲಿ ವೃತ್ತಿ ಕೌಶಲ್ಯ ಹೊಂದುವಂತ ಟೈಲರಿಂಗ್, ಚಿತ್ರಕಲೆ, ರಂಗೋಲಿ ಇತ್ಯಾದಿ ತರಬೇತಿಗಳನ್ನು ಅರ್ಹ ಶಿಕ್ಷಕರಿಂದ ನೀಡಲಾಗುತ್ತಿದೆ. ಇದರ ಮೂಲಕ ಸ್ವಾವಲಂಬಿ ಜೀವನಕ್ಕೆ ಪೂರ್ವ ಭಾವಿಯಾಗಿ ಕಿಶೋರಿ ಹಂತದಲ್ಲಿಯೇ ಇಲಾಖೆ ಮೂಲಕ ತರಬೇತಿ ನೀಡಿ ಜೀವನ ಮಟ್ಟ ಸುಧಾರಣೆಗೆ ಅನುಕೂಲ ಮಾಡಲಾಗುತ್ತಿದೆ. ಕಿಶೋರಿಯರಿಗೆ ವೃತ್ತಿ ನಿರತ ಕೌಶಲ್ಯ ತರಬೇತಿ ಗಳನ್ನು ಪಡೆಯುವುದರಿಂದ ಮುಂದಿನ ದಿನಗಳಲ್ಲಿ ಭವಿಷ್ಯ ಉತ್ತಮಗೊಳಲಿದೆ ಎಂದರು.
ಶಿಶು ಅಭಿವೃದ್ಧಿ ಇಲಾಖೆಯ ಸಹಾಯಕ ಅಧಿಕಾರಿ ಗೌರಮ್ಮ, ಗ್ರಾಪಂ ಅಧ್ಯಕ್ಷ ಕೆ.ನಾರಾಯಣಪ್ಪ ಮಾತನಾಡಿದರು. ತರಬೇತಿ ಪಡೆದ ಎಲ್ಲ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.
ನಿರ್ಮೂಲ ಸೇವಾ ಆಶ್ರಮದ ಚಲಪತಿ, ಅಂಗನವಾಡಿ ಕೇಂದ್ರಗಳ ಮೇಲ್ವಚಾರಕಿ ವಿನೋದ, ಭಾರತಿ, ಕಮಲಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

