ಜವಳಿ ಪಾರ್ಕ್ಗಾಗಿ 29 ರಂದು ಸಿಎಂ ಭೇಟಿಗೆ ನೇಕಾರರ ನಿಯೋಗ
ಬೆಳಗಾವಿ: ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಜವಳಿ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡುವಂತೆ ಆಗ್ರಹಿಸಿ ಮೇ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬೆಳಗಾವಿ ನೇಕಾರರ ವೇದಿಕೆ ನಿಯೋಗ ಬೆಂಗಳೂರಿಗೆ ತೆರಳಲಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ನೇಕಾರರ ವೇದಿಕೆ ಜಿಲ್ಲಾ ಕಾರ್ಯದರ್ಶಿ ಪರಶುರಾಮ ಢಗೆ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಕ್ಕೆ 6 ಜವಳಿ ಪಾರ್ಕ್ಗಳನ್ನು ಮಂಜೂರು ಮಾಡಿದ್ದು, ಇದರಲ್ಲಿ ಬರೀ ಒಂದೇ ಒಂದು ಟೆಕ್ಸ್ಟೈಲ್ ಪಾರ್ಕ್ ನಿರ್ಮಿಸಲಾಗಿದೆ. ನೆನೆಗುದಿಗೆ ಬಿದ್ದಿರುವ ಈ ಎಲ್ಲ ಯೋಜನೆಗಳನ್ನು ನಿರ್ಮಿಸುವ ಕಾಮಾಗಾರಿಗೆ ಚಾಲನೆ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದರು.
ಬಡ ನೇಕಾರರ ಕುಟುಂಬಗಳಿಗೆ ಮನೆ ಕಟ್ಟಿಸಿ ಕೊಡಬೇಕು. ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜವಳಿ ಮಾರುಕಟ್ಟೆ ಸಂಕೀರ್ಣ, ಭಾಗ್ಯಲಕ್ಷ್ಮಿ ಯೋಜನೆಯಲ್ಲಿ ವಿತರಿಸುವ ಸೀರೆಯನ್ನು ನೇಕಾರರಿಂದಲೇ ಖರೀದಿಸಬೇಕು. ಜವಳಿ ಇಲಾಖೆ ಬಗ್ಗೆ ಮಾಹಿತಿ ಹೊಂದಿದ ಅಧಿಕಾರಿಗಳನ್ನೇ ಸರ್ಕಾರ ನೇಮಿಸಬೇಕೆಂದು ಒತ್ತಾಯಿಸಲಾಗುವುದು ಎಂದರು. ಬೆಳಗಾವಿ, ಗದಗ, ತುಮಕೂರು ಜಿಲ್ಲೆಯ ನೇಕಾರರ ವೇದಿಕೆಯ ಪದಾಧಿಕಾರಿಗಳೊಳಗೊಂಡ ನಿಯೋಗ ಸಿಎಂ, ಜವಳಿ ಸಚಿವ ಹಾಗೂ ನೇಕಾರರ ನಾಯಕಿ ಉಮಾಶ್ರೀ ಅವರನ್ನು ಭೇಟಿ ಮಾಡಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

