ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ಗೆ ಚಾಲನೆ
ದೇವನಹಳ್ಳಿ: ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾ ಸಂಘ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ತ್ರಿಸ್ಟಾರ್ ರಾಜ್ಯ ಮಟ್ಟದ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಶಾಸಕರಾದ ಪಿಳ್ಳಮುನಿಶಾಮಪ್ಪರವರು ಸೋಮವಾರ ಚಾಲನೆ ನೀಡಿದರು.
ಪಂದ್ಯಾವಳಿಯನ್ನು ಶಾಸಕರಾದ ಪಿಳ್ಳಮುನಿಶಾಮಪ್ಪರವರು ಉದ್ಘಾಟಿಸಿ, ಪ್ರತಿ ಯುವಕರ ಮನಸು ಮತ್ತು ದೇಹ ಸ್ಥಿಮಿತದಲ್ಲಿರಬೇಕಾದರೆ ಕ್ರೀಡೆ ಮುಖ್ಯವಾಗಿರುತ್ತದೆ. ಸರ್ಕಾರದ ಜತೆಯಲ್ಲಿ ಸಂಘ ಸಂಸ್ಥೆಗಳು ಬೆರೆತು ಕೆಲಸ ಮಾಡಿದಾಗ ಮಾತ್ರ ಸಮಾಜ ಉತ್ತಮವಾಗಿರುತ್ತದೆ. ಸಂಘದವರು ನೀಡಿರುವ ಮನವಿಯ ಬಗ್ಗೆ ಸಂಬಂಧಪಟ್ಟ ಇಲಾಖಾ ಸಚಿವರ ಮೂಲಕ ಸಹಕಾರ ನೀಡುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಂಸದರಾದ ಸಿ.ನಾರಾಯಣಸ್ವಾಮಿರವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಪೋಲೀಸ್ ಅಧಿಕಾರಿಗಳಾದ ಎಸಿಪಿ ಎಸ್.ಎಸ್. ನಾಯಕ್ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಿ.ಎಂ.ವೇಣುಗೋಪಾಲ್ ವಹಿಸಿದ್ದರು. ರಮೇಶಬಾಬು ಮನವಿ ಅರ್ಪಿಸಿ ಸಂಘದ ಕ್ರೀಡಾಂಗಣ ಅಭಿವೃದ್ಧಿಗಾಗಿ 8 ಲಕ್ಷವನ್ನು ಸರ್ಕಾರದಿಂದ ಮಂಜೂರು ಮಾಡಿಸಬೇಕೆಂದು ಕೋರಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಮುನಿರಾಜು, ಗೌರವಾಧ್ಯಕ್ಷ ಪಟೇಲ್ ದೊಡ್ಡವೆಂಕಟಪ್ಪ, ಪುರಸಭಾ ಸದಸ್ಯ ನರಸಿಂಹಮೂರ್ತಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

