ಬೆಂಗಳೂರು ಗ್ರಾಮಾಂತರ

ಆಂಗ್ಲ ಭಾಷಾ ತರಬೇತಿ ಕಾರ್ಯಾಗಾರ

Published On :

ದೇವನಹಳ್ಳಿ: ದೇವನಹಳ್ಳಿ ತಾಲೂಕು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ , ಲಯನ್ಸೆ ಸೇವಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ  ಖ್ಯಾತ ಶಿಕ್ಷಣ ತಜ್ಞ ಪ್ರೊ. ಜಿ.ಎಸ್. ಮುಡಂಬಡಿತ್ತಾಯ ಅವರಿಂದ ಶಿಕ್ಷಕರಿಗಾಗಿ ಆಂಗ್ಲ ಭಾಷಾ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಮಾರಂಭದ ಉದ್ಘಾಟನೆಯನ್ನು ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಎಚ್.ವಿ. ವೆಂಕಟೇಶಪ್ಪ ನೆರವೇರಿಸಿ ನಾವು ಯಾವುದೇ ಭಾಷೆಯನ್ನು ಬಳಸಿದರೆ ಮಾತ್ರ ಆ ಭಾಷೆ ಬೆಳೆಯಲು ಸಾಧ್ಯ. ಬಳಕೆ ಕಡಿಮೆಯಾದಂತೆ ನಶಿಸಿಹೋಗುತ್ತದೆ ಎಂದರಲ್ಲದೆ ಭಾಷೆಯ ಬಳಕೆ ಬಗ್ಗೆ ನಿರಂತರ ಅಭ್ಯಾಸ ಹಾಗೂ ಪ್ರಾವಿಣ್ಯತೆ ಇರಬೇಕಾಗುತ್ತದೆ ಎಂದರು. ಶಿಕ್ಷಕರು ಮಕ್ಕಳಲ್ಲಿ ಭಾಷೆ ಕಲಿಯುವ ಬಗ್ಗೆ ವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಅಲ್ಲದೆ ಶಿಕ್ಷಕರು ತಮ್ಮ ಜ್ಞಾನ ಮಕ್ಕಳಿಗೆ ಹಂಚಿದಷ್ಟೂ ನಿಮ್ಮ ಜ್ಞಾನ ಬೆಳೆಯುತ್ತದೆ ಎಂದರು. ಶಿಕ್ಷಣ ತಜ್ಞರಾದ ಪ್ರೊ. ಜಿ.ಎಸ್.ಮುಡಂಬಡಿತ್ತಾಯ ಅವರು ಮಾತನಾಡಿ ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಯಾವುದೇ ಭಾಷೆ ಕಲಿಸುವುದರ ಮೊದಲು ತಮ್ಮ ಬೋಧಿಸುವ ಕೌಶಲ್ಯ ಪ್ರತಿ ದಿನ ಹೆಚ್ಚಿಸಿಕೊಳ್ಳಬೇಕು. ಅಲ್ಲದೆ ಪ್ರತಿ ವಿದ್ಯಾರ್ಥಿಗೆ ಯಾವ ಮಟ್ಟದಲ್ಲಿ ಕಲಿಯುತ್ತಿದ್ದಾನೆ ಎಂಬುದನ್ನು ತಿಳಿಯಬೇಕು ಎಂದರು. ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಕೆ. ಶ್ರೀನಿವಾಸ್ ವಹಿಸಿದ್ದರು, ಲಯನ್ಸ್ ಸೇವಾ ಪ್ರತಿಷ್ಠಾನ ಅಧ್ಯಕ್ಷರಾದ ಕೆ.ಸಿ.ಲೋಕೇಶ್ ಮಾತನಾಡಿ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು. ಮುಖ್ಯ ಅತಿಥಿಗಳಾಗಿ ಖಾಸಗೀ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಅಧ್ಯಕ್ಷರಾದ ಚೇತನ್ ಕುಮಾರ್, ಬಿಇಒ ಮುನಿರಾಜು ಉಪಸ್ಥಿತರಿದ್ದರು.

2 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ದೊಡ್ಡಬಳ್ಳಾಪುರ:
ಕಳೆದ ಭಾನುವಾರ ಮನೆಯಿಂದ ಹೊರಗೆ ಹೋಗಿ ಬರುವುದಾಗಿ ಹೇಳಿ ವ್ಯಕ್ತಿ ಮಂಗಳವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿ ಮಚ್ಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ಥಳೀಯ ಶಿವಲಿಂಗಯ್ಯ(40) ಮೃತಪಟ್ಟಿರುವ ದುರ್ದೈವಿ. ಮಚ್ಚೇನಹಳ್ಳಿಯ ಕೆರೆಯಲ್ಲಿ ಆತನ ಕಳೇಬರ ಪತ್ತೆಯಾಗಿದೆ. ಶವ ನೋಡಿದ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯನಾಗಿ ಕೆಲಸ ಮಾಡಿದ್ದ ಈತ ದಿಢೀರನೇ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮನೆಯಿಂದ ಹೋದವ ಮತ್ತೆ ಹಿಂತಿರುಗಿಲ್ಲ ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಎನ್ನಲಾಗಿದೆ. ರಾಜಕೀಯ ವೈಷಮ್ಯ ಅಥವಾ ಮತ್ತಾವುದೋ ವೈಯಕ್ತಿಕ ವೈಷಮ್ಯದಿಂದ ಈತನನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.