ಬಿತ್ತನೆ ಬೀಜಗಳ ಕೊರತೆ ಇಲ್ಲ: ಬಿ.ಟಿ. ವಿನೋದಮ್ಮ
ದೇವನಹಳ್ಳಿ: ತಾಲೂಕಿನಲ್ಲಿ ಬಿತ್ತನೆ ಬೀಜಗಳ ಸಾಕಷ್ಟು ದಾಸ್ತಾನಿದ್ದು, ಅವಶ್ಯವಿರುವ ರೈತರು ಬಿತ್ತನೆ ಬೀಜಗಳನ್ನು ನಿಗದಿತ ದರದಲ್ಲಿ ಪಡೆಯಬಹುದೆಂದು ಸಹಾಯಕ ಕೃಷಿ ನಿರ್ದೇಶಕರಾದ ಬಿ.ಟಿ.ವಿನೋದಮ್ಮರವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸಗೊಬ್ಬರಗಳ ಬೆಲೆಯನ್ನು (ಯೂರಿಯ ಬಿಟ್ಟು) ಕಳೆದ ವರ್ಷದ ದರಕ್ಕಿಂತ ಈ ವರ್ಷದಲ್ಲಿ (ಏ. 1ರಂತೆ) ಸರ್ಕಾರ ಒಂದು ಮೂಟೆಗೆ 50 ರಿಂದ 80 ರೂಗಳವರೆಗೂ ಕಡಿಮೆ ಮಾಡಿದೆ ಎಂದು ತಿಳಿಸಿದ್ದಾರೆ.
ತಾಲೂಕಿನ ಸಹಕಾರ ಸಂಘಗಳಲ್ಲಿ ಅಲ್ಲದೆ ಖಾಸಗೀ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಎಂಒಪಿ, ಡಿಎಪಿ, ಅಮೋನಿಯಂ ಸಲ್ಫೇಟ್, 20.20.13, 10.26.26, 12.36.16, 20.20.0, 16.20.0.13 ಹೀಗೆ ಒಟ್ಟು 14 ನಮೂನೆಯ ರಸಗೊಬ್ಬರಗಳ ಬೆಲೆ ಕಡಿಮೆಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ತಾಲೂಕಿನ ಕಸಬಾ, ವಿಜಯಪುರ, ಚನ್ನರಾಯಪಟ್ಟಣ ಹಾಗೂ ಕುಂದಾಣ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ ತಳಿ ಎಂ.ಆರ್1. ಜಿಪಿಯು-28, ತೊಗರಿ ಬಿಆರ್ಜಿ 1 ಮತ್ತು 2 ತಳಿಗಳು ಹಾಗೂ ಅಲಸಂದೆ ಬಿತ್ತನೆ ಬೀಜಗಳು ಸರ್ಕಾರದ ಸಹಾಯಧನದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

