ಬೆಂಗಳೂರು ಗ್ರಾಮಾಂತರ

ಉದ್ಯೋಗ ಮೇಳಕ್ಕೆಉತ್ತಮ ಪ್ರತಿಕ್ರಿಯೆ

Published On :

ಮೈಸೂರು: ಯುವಜನತೆಯ ನಿರುದ್ಯೋಗ ನಿವಾರಣೆಗಾಗಿ ಇಲ್ಲಿನ ನಂಜರಾಜ ಬಹುದ್ದೂರ್ ಛತ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಜ್ಯುಬಿಲೆಂಟ್ ಭಾರತೀಯ ಪ್ರತಿಷ್ಠಾನ ಹಾಗೂ ಲೇಬರ್ ನೆಟ್ ಸಂಸ್ಥೆ ಸಂಯುಕ್ತಾಶ್ರದಲ್ಲಿ ಏರ್ಪಡಿಸಿದ್ದ ಈ ಉದ್ಯೋಗ ಮೇಳವನ್ನು ನಂಜನಗೂಡಿನ ಲೇಬರ್‌ನೆಟ್ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ಜಾನ್ಸನ್ ಉದ್ಘಾಟಿಸಿದರು. ಈ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಭ್ಯರ್ಥಿಗಳು ಹಾಗೂ ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಬಿಎಂ, ಬಿ.ಇ ಅಲ್ಲದೆ ಎಂಬಿಎ, ಎಂ.ಕಾಂ, ಎಂಎಸ್‌ಡಬ್ಲ್ಯೂ ಹಾಗೂ ಎಂಸಿಎ ಪದವೀಧರರು ಭಾಗವಹಿಸಿ ತಮ್ಮ ನೆಚ್ಚಿನ ಕಂಪನಿಗಳಿಗೆ ಅರ್ಜಿ ಸಲ್ಲಿಸುವುದು ಹಾಗೂ ಸ್ವವಿವರ ಮತ್ತು ಅನುಭವ ಮುಂತಾದ ಮಾಹಿತಿ ನೀಡುವುದು ಕಂಡುಬಂತು.   ಹಿಂದೂಜಾ ಗ್ಲೋಬಲ್ ಸಲ್ಯೂಷನ್, ನವಭಾರತ ಫರ್ಟಿಲೇಷರ್ಸ್, ಮೈಸೂರು ಐಟಿ ಸಲ್ಯೂಷನ್, ನಂದಿ ಟಿವಿಎಸ್, ಭೂಮಿಕಾ ಹೌಸಿಂಗ್ ಫೈನಾನ್ಸ್, ಕೆಫೆಕಾಫಿ ಡೇ, ಎಚ್‌ಡಿಎಫ್‌ಸಿ ಹಾಗೂ ಎಲ್‌ಐಸಿ ಸೇರಿದಂತೆ 10ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಿದ್ದವು.ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ವಿವಿಧ ಕಂಪನಿಗಳನ್ನು ಆಹ್ವಾನಿಸಿ, ತಮಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಾನ್ಸನ್ ತಿಳಿಸಿದರು. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ 500 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.