ಕುಡಿವ ನೀರಿನ ಪೂರೈಕೆಗಾಗಿ ಅಗತ್ಯ ಯೋಜನೆ ರೂಪಿಸುವೆ: ಶಾಸಕ
ನೆಲಮಂಗಲ: ಕ್ಷೇತ್ರದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಅಗತ್ಯ ಯೋಜನೆ ರೂಪಿಸಿ ನೀರಿನ ಬವಣೆ ಬಗೆಹರಿಸಲು ಶ್ರಮಿಸುವುದಾಗಿ ಕ್ಷೇತ್ರದ ನೂತನ ಜೆ.ಡಿ.ಎಸ್ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.
ಅವರು ಬುಧವಾರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಮತದಾರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡುತ್ತಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿನ ಕುಂದುಕೊರತೆಗಳ ಬಗ್ಗೆ ಸ್ಥಳೀಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಬಗೆಹರಿಸುವ ಮೂಲಕ ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ಕ್ಷೇತ್ರದಲ್ಲಿ ಜೆ.ಡಿ.ಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ಇತಿಹಾಸವನ್ನು ಬದಲಿಸಿದ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಗ್ರಾಮದ ಮುಖಂಡರುಗಳಾದ ಸಿ.ಜಿ.ಗ್ರೂಪ್‌ನ ಮಂಜುನಾಥ್, ಮಹಿಮಣ್ಣ, ರಾಜಣ್ಣ, ಚಿಕ್ಕಣ್ಣ, ಸಿದ್ದಪ್ಪ,
ಬೈಲಪ್ಪ ಅವರು ಗ್ರಾಮಕ್ಕೆ ಭೇಟಿ ನೀಡಿದ್ದ ನೂತನ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮದ ಅಶೋಕ್, ರಮೇಶ್, ಹನುಮಂತರಾಜು, ವರದರಾಜು, ಕುಮಾರ್, ಮಾಜಿ ತಾಲೂಕು ಪಂಚಾಯ್ತಿ ಅಧ್ಯಕ್ಷ ರಂಗಸ್ವಾಮಿ ಇದ್ದರು.
'ಕೊಳವೆಬಾವಿ ಆಳ ಹೆಚ್ಚಳವಿಲ್ಲ್ಲ'
ಬೆಂಗಳೂರು: ಬೆಂಗಳೂರು ಜಲಮಂಡಳಿ ಕೊಳವೆ ಬಾವಿಗಳನ್ನು ಹೊಸದಾಗಿ ಕೊರೆಸುವ ಅಥವಾ ಆಳ ಹೆಚ್ಚಿಸುವ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಎಂದು ಜಲಮಂಡಳಿ ಸ್ಪಷ್ಟಪಡಿಸಿದೆ.ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ ನಗರಸಭೆ ಮತ್ತು ಪುರಸಭೆ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆ ಇರಲಿಲ್ಲ. ಅವು ಮಂಡಳಿ ವ್ಯಾಪ್ತಿಗೆ ಬಂದ ನಂತರ ಅಲ್ಲಿರುವ ಕೊಳವೆ ಬಾವಿಗಳು ಮಂಡಳಿಗೆ ಹಸ್ತಾಂತರಿಸಲ್ಪಟ್ಟಿದ್ದು, ಆ ಪ್ರದೇಶಗಳಲ್ಲಿ ಪರ್ಯಾಯ ನೀರಿನ ಮೂಲಗಳಿಲ್ಲದ ಕಾರಣ ಕೊಳವೆ ಬಾವಿ ನೀರು ಒದಗಿಸಲಾಗುತ್ತಿತ್ತು. ಆದರೆ, ಕಾವೇರಿ 4ನೇ ಹಂತ 2ನೇ ಘಟ್ಟದ ಯೋಜನೆ 2012ರ ಅಕ್ಟೋಬರ್‌ನಲ್ಲಿ ಚಾಲನೆಗೊಂಡ ಬಳಿಕ ಆ ಪ್ರದೇಶಗಳಿಗೂ ಕಾವೇರಿ ನೀರು ಒದಗಿಸಲಾಗುತ್ತಿದೆ.
ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವುದರ ಜತೆಗೆ ಹೊಸದಾಗಿ ಕೊರೆಸುವವರು ಅನುಮತಿ ಪಡೆದೇ ಕೊರೆಸಬೇಕು ಎಂದು ಸರ್ಕಾರ ಕಾಯ್ದೆಯನ್ನೂ ಜಾರಿಗೊಳಿಸಿದೆ.
ಜತೆಗೆ, ನಗರದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಮಂಡಳಿ ಕಡ್ಡಾಯಗೊಳಿಸಿದೆ. ಆ ಪ್ರಕಾರ ಈಗಾಗಲೇ ನಿರ್ಮಾಣವಾಗಿರುವ 60 ್ಗ 40 ಅಥವಾ ಅದಕ್ಕೂ ಅಧಿಕ ವಿಸ್ತೀರ್ಣದ ನಿವೇಶನಗಳಲ್ಲಿರುವ ಕಟ್ಟಡಗಳು ಹಾಗೂ ಹೊಸದಾಗಿ ನಿರ್ಮಾಣವಾಗುವ 30್ಗ40 ಹಾಗೂ ಅದಕ್ಕೂ ಅಧಿಕ ವಿಸ್ತೀರ್ಣದ ನಿವೇಶನದಲ್ಲಿರುವ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ. ತಪ್ಪಿದಲ್ಲಿ ಅಂತಹ ಕಟ್ಟಡಗಳಿಗೆ ನೀರು ಮತ್ತು ಒಳಚರಂಡಿ ಸೌಕರ್ಯ ನೀಡುವುದಿಲ್ಲ ಎಂದು ಮಂಡಳಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

