ಬೆಂಗಳೂರು ಗ್ರಾಮಾಂತರ

ನಾಳೆ ಬಸವೇಶ್ವರ ಜಯಂತಿ

Published On :

ಮಾಗಡಿ: ಕುದೂರಿನ ವೀರಶೈವ ಯುವ ವೇದಿಕೆ ವತಿಯಿಂದ ಮೇ 25 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ ಕುದೂರಿನ ಶ್ರೀಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. ಶಿವಗಂಗೆ ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಗದ್ದುಗೆ ಮಠದ ಮಹಂತಸ್ವಾಮಿ, ಚಿಕ್ಕಮಸ್ಕಲ್ ಮಠದ ಬಸವಲಿಂಗಸ್ವಾಮಿ,ಕುದೂರು ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ಬಾಲಕೃಷ್ಣ, ಕುತ್ತಿನಗೆರೆ ಗಂಗರಾಜು, ಉದಯಕುಮಾರ್, ಷಡಕ್ಷರಿ, ಯತೀಶ್,ಇತರರು ಭಾಗವಹಿಸಲಿದ್ದಾರೆ.

ಅಪಘಾತದಲ್ಲಿ ಇಬ್ಬರ ಸಾವು
ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬಾಣಸವಾಡಿ ಹಾಗೂ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿವೆ. ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿರುವ ಘಟನೆ ಬಾಣಸವಾಡಿಯ ಹೊರಮಾವು ರಿಂಗ್ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೂಡಿ ನಿವಾಸಿ ನರಸಮ್ಮ(30) ಮೃತರು. ಅವರ ಪತಿ ನಾಗಪ್ಪ ಅಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ. ಹೆಣ್ಣೂರಿನಲ್ಲಿರುವ ನರಸಮ್ಮ ಅವರ ಪೋಷಕರ ಮನೆಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಅಪಘಾತವಾದಾಗ ನರಸಮ್ಮ ಅವರು ಎಡಭಾಗಕ್ಕೆ ಬಿದ್ದು, ಲಾರಿ ಚಕ್ರ ಅವರ ಮೇಲೆ ಹಾಯ್ದು ಸ್ಧಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ಸಾವು: ಮತ್ತೊಂದು ಪ್ರಕರಣದಲ್ಲಿ ಆಂಧ್ರಪ್ರದೇಶದ ಎಪಿಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿಕ್ಕಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಪಘಾತವೆಸಗಿದ ಬಸ್(ಎಪಿ 28 ಜಡ್ 3900)ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕನನ್ನು ಬಂಧಿಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ವಾರೀಸುದಾರರು ಚಿಕ್ಕಪೇಟೆ ಸಂಚಾರ ಠಾಣೆಯ ಪೊಲೀಸರನ್ನು ಸಂಪರ್ಕಿಸಬಹುದು.

ಮೋರಿಯಲ್ಲಿ ಯುವಕನ ಶವ ಪತ್ತೆ
ಬೆಂಗಳೂರು:  ಬ್ಯಾಟರಾಯನಪುರದ ಪ್ರಮೋದ್‌ನಗರದ ಚರಂಡಿಲ್ಲಿ ಸುಮಾರು 25 ವರ್ಷದ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದೆ. ಆತನ ತಲೆ, ಎದೆ ಹಾಗೂ ತೊಡೆ ಭಾಗದಲ್ಲಿ ಗಾಯಗಳಾಗಿದ್ದು, ಬೇರೆಡೆ ಹತ್ಯೆ ಮಾಡಿ ಮೃತದೇಹವನ್ನು ತಂದು ಚರಂಡಿಯಲ್ಲಿ ಎಸೆದುಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುರುವಾರ ಬೆಳಗ್ಗೆ ಶ್ವಾನಗಳು ಚರಂಡಿಯಲ್ಲಿ ಬಿದ್ದಿದ್ದ ಮೃತದೇಹ ತಿನ್ನಲು ಕಚ್ಚಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.