ಡಿ.ಕೆ.ಶಿವಕುಮಾರ್ಗೆ ಸಚಿವ ಸ್ಥಾನ ನೀಡಿ
ಕನಕಪುರ: ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ರಾಮನಗರ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಜಿಪಂ, ತಾಪಂ, ಗ್ರಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಲಿಖಿತವಾಗಿ ತಿಳಿಸಿ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ರವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿಯಾವುಲ್ಲಾ, ಮಾಜಿ ವಿಪ ಸದಸ್ಯ ಎಸ್.ರವಿ, ಡಿ.ಕೆ.ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯದೇವ್, ಕೆ.ಎನ್. ದಿಲೀಪ್, ಕೆಪಿಸಿಸಿ ಸದಸ್ಯ ಹೊನ್ನಿಗನಹಳ್ಳಿ ಶ್ರೀಕಂಠು, ಸಿದ್ಧವೀರ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಂಪರಾಜು, ಜಿಪಂ ಸದಸ್ಯರಾದ ಇಕ್ಬಾಲ್ಹುಸೇನ್, ನಳಿನಾ ರವಿಶಂಕರ್, ಗೀತಾ ಈಶ್ವರ್, ಮರಸಪ್ಪರವಿ ಮೊದಲಾದವರು ನೇತೃತ್ವ ವಹಿಸಿದ್ದರು. ವಿಪ ಮಾಜಿ ಸದಸ್ಯ ಎಸ್.ರವಿ ಮಾತನಾಡಿ, ಶಾಸಕ ಡಿ.ಕೆ.ಶಿವಕುಮಾರ್ ಕನಕಪುರದ ಅಭಿವೃದ್ಧಿಗೆ ಕಳೆದ ಐದು ವರ್ಷಗಳಲ್ಲಿ ಅಭೂತಪೂರ್ವವಾಗಿ ಶ್ರಮಿಸಿದ್ದಾರೆ. ಉತ್ತಮ ಸಂಘಟಕರೂ ಆಗಿರುವ ಅವರು ಆರು ಬಾರಿ ಜನಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ. ದಕ್ಷ ವ್ಯಕ್ತಿಯನ್ನು ಮೂಲೆಗುಂಪು ಮಾಡುತ್ತಿರುವುದನ್ನು ಕ್ಷೇತ್ರದ ಜನತೆ ಸಹಿಸಲು ಸಾಧ್ಯವಿಲ್ಲ, ಅವರ ಮೇಲಿರುವ ಆರೋಪಗಳು ಯಾವುದೂ ನಿರೂಪಿತವಾಗಿಲ್ಲ. ಕೇವಲ ಆಕ್ಷೇಪಣೆ ಆರೋಪಗಳ ಮೇಲೆ ವ್ಯಕ್ತಿಯನ್ನು ಕಡೆಗಣಿಸುವುದು ಮುಂಬರುವ ಲೋಕಸಭಾ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

