ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನ
ರಾಮನಗರ: ಮಾಗಡಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್‌ಪೂರ್ವ, ಮೆಟ್ರಿಕ್‌ನಂತರದ ಬಾಲಕ, ಬಾಲಕಿಯರ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 2013-14ನೇ ಸಾಲಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪಡೆಯಲು ಇಚ್ಛಿಸುವವರು ಮಾಗಡಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 10ರ ಸಂಜೆ 5ರೊಳಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿಗೆ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.080-27745379 ಸಂಪರ್ಕಿಸಬಹುದು.
ಮಕ್ಕಳ ಕಲ್ಯಾಣ: ಅರ್ಜಿ ಆಹ್ವಾನ
ರಾಮನಗರ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಇಬ್ಬರು ವ್ಯಕ್ತಿಗಳಿಗೆ ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉದ್ದೇಶಿಸಿದೆ. ಪ್ರಶಸ್ತಿಯು ವ್ಯಕ್ತಿಗಳಿಗೆ ತಲಾ ರು.25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಸಂಸ್ಥೆಗಳಿಗೆ ತಲಾ ರು.1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. 2014 ಸಾಲಿನಲ್ಲಿ ಈ ಪ್ರಶಸ್ತಿಗೆ ಆಸಕ್ತ ಅರ್ಹ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.ವ್ಯಕ್ತಿ, ಸಂಸ್ಥೆಗಳು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅಂದರೆ, ಮಕ್ಕಳ ಆರೋಗ್ಯ, ಪೌಷ್ಠಿಕಾಂಶ, ಶಿಕ್ಷಣ, ಕಲೆ, ಸಂಸ್ಕೃತಿ ಹಾಗೂ ಕ್ರೀಡೆಯ ಅಭಿವೃದ್ಧಿ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಗುರುತರವಾದ ಸೇವೆಯನ್ನು ಕೈಗೊಂಡಿರಬೇಕು. ಪ್ರತಿಯೊಂದು ವಿಭಾಗದಲ್ಲಿ ಉಚಿತವಾಗಿ ಸೌಲಭ್ಯ ಪಡೆದ ಒಟ್ಟು ಮಕ್ಕಳ ಸಂಖ್ಯೆ, ಭರಿಸಿದ ವೆಚ್ಚದ ವಿವರ, ವಸತಿ, ವಸತಿ ರಹಿತ ಸೇವೆಗಳ ವಿವರವನ್ನು ಪ್ರಸ್ತಾವನೆಯಲ್ಲಿ ಅಂಕಿ ಅಂಶಗಳ ಸಮೇತ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್‌ಭವನ, 2ನೇ ಮಹಡಿ ಬಿ.ಎಂ.ರಸ್ತೆ ರಾಮನಗರ ಇಲ್ಲಿಗೆ ಸಲ್ಲಿಸುವುದು. ಮಾಹಿತಿಗೆ ದೂ. 080-27273036, 080-27272741 ಸಂಪರ್ಕಿಸಬಹುದು.
ಕಚೇರಿ ಸ್ಥಳಾಂತರ
ರಾಮನಗರ: ರಾಮನಗರ ಉಪ ವಿಭಾಗದ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಯನ್ನು ಮಿನಿ ವಿಧಾನಸೌಧದಿಂದ ಕಂದಾಯ ಭವನದ ಮೂರನೇ ಮಹಡಿಗೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಇನ್ನು ಮುಂದೆ ಈ ವಿಳಾಸದಲ್ಲಿ ಸಂಪರ್ಕಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

