ಬೆಂಗಳೂರು ಗ್ರಾಮಾಂತರ

ಚಿಕೂನ್‌ಗುನ್ಯ ಶಂಕೆ: ಶಾಸಕ ಪಿಳ್ಳಮುನಿಶಾಮಪ್ಪ ಭೇಟಿ, ಪರಿಶೀಲನೆ

Published On :

ದೇವನಹಳ್ಳಿ:ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ತಾಲೂಕಿನ ಗಡಿ ಭಾಗದ ವೆಂಕಟಗಿರಿಕೋಟೆ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿ ನೂರಾರು ಮಂದಿ ಚಿಕೂನ್‌ಗುನ್ಯ ರೋಗದಿಂದ ಬಳಲುತ್ತಿದ್ದು, ಸರ್ಕಾರದ ಆರೋಗ್ಯ ಇಲಾಖೆಯಿಂದ ಸರಿಯಾದ ಚಿಕಿತ್ಸೆ ದೊರೆಯದೆ ವಿಧಿ ಇಲ್ಲದೆ ಖಾಸಗಿ ವೈದ್ಯರ ಬಳಿ ದುಬಾರಿ ಹಣ ತೆತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕ ಪಿಳ್ಳಮುನಿಶಾಮಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ.ಚನ್ನಮಲ್ಲಯ್ಯ ಹಾಗೂ ವೈದ್ಯಕೀಯ ಸಿಬ್ಬಂದಿ ವೆಂಕಟಗಿರಿಕೋಟೆ ಗ್ರಾಮದ ಕಾಲೋನಿಗೆ ಭೇಟಿ ನೀಡಿ ಚಿಕೂನ್‌ಗುನ್ಯದಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ಪಡೆದು, ಅಗತ್ಯವಾದ ವೈದ್ಯಕೀಯ ಸಿಬ್ಬಂದಿ ಆಯೋಜಿಸಲಾಗಿದ್ದು ಸೂಕ್ತ ಚಿಕಿತ್ಸೆ ದೊರೆಯಲಿದೆ ಎಂದು ಡಿಎಚ್‌ಒ ತಿಳಿಸಿ ಈಗಾಗಲೇ 1.5 ಲಕ್ಷ ರೂಗಳ ಔಷಧಗಳು ದಾಸ್ತಾನಿದೆ ಎಂದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪಿಳ್ಳಮುನಿಶಾಮಪ್ಪ, ಚಿಕೂನ್‌ಗುನ್ಯ ಹರಡಲು ಮುಖ್ಯ ಕಾರಣ ಕಾಲೋನಿಯಲ್ಲಿ ಗ್ರಾಮ ಪಂಚಾಯಿತಿಯವರು ಸ್ವಚ್ಛತೆಗೆ ಆದ್ಯತೆ ನೀಡದೆ ಇರುವುದೇ ಆಗಿದ್ದು, ಈ ಭಾಗದ ಜನರು ಸಹ ಕಾಳಜಿ ವಹಿಸಬೇಕು ಎಂದರಲ್ಲದೆ ಈ ಭಾಗದಲ್ಲಿ ಎಷ್ಟು ಮಂದಿಗೆ ರೋಗ ಹಬ್ಬಿದೆ ಮತ್ತು ಸರ್ಕಾರದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
 ಜೆಡಿಎಸ್ ಮುಖಂಡರಾದ ಶ್ರೀನಿವಾಸ್, ಮುನಿಶಾಮಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.